ರಾಯಚೂರು: ಕಾಂಗ್ರೆಸ್ ಪಕ್ಷ ಸಂವಿಧಾನದ ವಿಚಾರದಲ್ಲಿ ಬಿಜೆಪಿ ಪಕ್ಷದ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದು, ಸಂವಿಧಾನ ಬದಲಾವಣೆ ಎಂಬ ಸುಳ್ಳು ಆರೋಪವನ್ನು ಹೊರಿಸುತ್ತಿದ್ದು, ಒಂದು ವೇಳೆ ಬಿಜೆಪಿ ಪಕ್ಷದಿಂದ ಸಂವಿಧಾನ ಬದಲಾವಣೆಯಾದಲ್ಲಿ ನನ್ನ ರುಂಡವನ್ನು ಕಡಿದುಕೊಳ್ಳುತ್ತೇನೆ ಎಂದು ನಗರ ಶಾಸಕ ಡಾ.ಶಿವರಾಜ ಪಾಟೀಲ್ ಅವರು ಹೇಳಿದರು.
ಅವರು ನಗರದ ರಾಮಲಿಂಗೇಶ್ವರ ದೇವಸ್ಥಾನ ಆವರಣದಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಕಳೆದ 50 ವರ್ಷಗಳಿಂದ ಕಾಂಗ್ರೆಸ್ ದೇಶದಲ್ಲಿ ಆಡಳಿತ ನಡೆಸಿದ್ದು, ಆದರೆ ಅಭಿವೃದ್ಧಿ ಕಾರ್ಯಗಳಲ್ಲಿ ಮಾತ್ರ ಶೂನ್ಯ ಸಾಧನೆ ಮಾಡಿದೆ. ಆದರೆ ಬಿಜೆಪಿ ಸರ್ಕಾರ ಕೇವಲ ಹತ್ತು ವರ್ಷದಲ್ಲಿ ಸಾಕ್ಷಟು ರಾಷ್ಟç ಅಭಿವೃದ್ಧಿ ಕಾರ್ಯಗಳನ್ನು ಮಾಡಿದೆ ಎಂದರು.
ರಾಯಚೂರಿನಲ್ಲಿ 10 ಸಾವಿರ ವಸತಿ ಸೌಲಬ್ಯಗಳನ್ನು ನೀಡಿ, ಹನ್ನೆರಡು ಸಾವಿರ ಕುಟುಂಬಗಳಿಗೆ ಹಕ್ಕುಪತ್ರಗಳನ್ನು ನೀಡಲಾಗಿದೆ. ಆದರೆ ಕಾಂಗ್ರೆಸ್ ಪಕ್ಷ ತನ್ನ ಅವೈಜ್ಞಾನಿಕ ಯೋಜನೆಗಳನ್ನು ಜಾರಿಗೆ ತಂದು ಮಹಿಳೆಯರಲ್ಲಿ ಗಲಾಟೆಗಳನ್ನು ಮಾಡಿಸುತ್ತಿದೆ. ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಲ್ಪಸಂಖ್ಯಾತರ ಮಹಿಳೆಯರಿಗೆ ಕೌಟುಂಬಿಕ ಭದ್ರತೆಯನ್ನು ನೀಡಿದ್ದು, ಮುಂದಿನ ದಿನಗಳಲ್ಲಿ ಬಿಜೆಪಿ ಪಕ್ಷದಲ್ಲಿ ಮಹಿಳೆಯರೇ ಪ್ರಧಾನಿ ಆಗಲಿದ್ದಾರೆ ಎಂದರು.
ಕಾಂಗ್ರೆಸ್ ಪಕ್ಷವು ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದರೇ ಸಂವಿಧಾನ ಬದಲಾವಣೆ ಮಾಡುತ್ತದೆ ಎಂದು ಹೇಳಿಕೆಯನ್ನ ನೀಡುತ್ತಿದ್ದು, ಪವಿತ್ರವಾದ ಸಂವಿಧಾನ ಯಾರಿಂದಲೂ ಬದಲಾವಣೆ ಮಾಡಲು ಸಾಧ್ಯವಿಲ್ಲ ಒಂದು ವೇಳೆ ಬಿಜೆಪಿ ಸರ್ಕಾರದಿಂದ ಸಂವಿಧಾನ ಬದಲಾವಣೆ ಆದಲ್ಲಿ ನನ್ನ ರುಂಡವನ್ನು ಕಡಿದುಕೊಳ್ಳುತ್ತೇನೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಎನ್.ಶಂಕರಪ್ಪ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ರವೀಂದ್ರ ಜಲ್ದಾರ,ಜೆಡಿಎಸ್ ಕಾರ್ಯಧ್ತಕ್ಷ ಎನ್ ಶಿವಶಂಕರ,, ಡಾ.ನಾಗರಾಜ ಬಾಲ್ಕಿ, ನಗರ ಬಿಜೆಪಿ ಅದ್ಯಕ್ಷ ರಾಘವೇಂದ್ರ ಉಟ್ಕೂರು, ವಿಜಯಕುಮಾರ ಸಜ್ನನ,ರಾಮಚಂದ್ರ ಕಡಗೋಲ, ಗುಡ್ಸಿ ನರಸರೆಡ್ಡಿ ಸೇರಿದಂತೆ ಅನೇಕರಿದ್ದರು.