ಮಾನ್ವಿ.ಬಸ್ನ ಸ್ಟೇರಿಂಗ್ನ ರಾಡ್ ಕಟ್ ಆಗಿ ಸೇತುಗೆ ತಡೆಗೋಡೆಗೆ ಡಿಕ್ಕಿ ಹೊಡೆದ ಘಟನೆ ತಾಲೂಕಿನ ನಂದಿಹಾಳ ಗ್ರಾಮದ ಬಳಿ ನಡೆದಿದೆ.
20ಕ್ಕೂ ಅಧಿಕ ಜನರಿಗೆ ಗಾಯಗಳಾಗಿವೆ, ಗಂಭೀರವಾಗಿ ಗಾಯಗೊಂಡವರನ್ನು ರಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದು, ಸಣ್ಣ ಪುಟ್ಟ ಗಾಯಗಳಾಗದವರಿಗೆ ಮಾನವಿ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಒದಗಿಸಲಾಗಿದೆ. ಬಸ್ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಘಟನೆ ವಿವರ:- ಮಾನವಿಯಿಂದ ಸಿಂಧನೂರು ಕಡೆಗೆ ತೆರಳುತ್ತಿದ್ದ ಬಸ್ ಸ್ಟೇರಿಂಗ್ನ ರಾಡ್ ತುಂಡಾಗಿದ್ದರಿಂದ ನಿಯಂತ್ರಣ ತಪ್ಪಿದ ಬಸ್ ನಂದಿಹಾಳ ಗ್ರಾಮದ ಸಮೀಪದ ಸೇತುವೆಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬಸ್ ರಸ್ತೆ ಬಿಟ್ಟು ಹೊಲದಲ್ಲಿ ವಾಲಿದೆ ಬಸ್.ನಲ್ಲಿದ್ದ 50 ಜನರ ಪೈಕಿ 20ಕ್ಕೂ ಅಧಿಕ ಜನರಿಗೆ ಗಾಯಗಳಾಗಿವೆ.
ಸ್ಥಳಕ್ಕೆ ಮಾನವಿ ಪೋಲಿಸ್ ಠಾಣೆ ಪೋಲಿಸರು ತೆರಳಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಈ ಕುರಿತು ಮಾನವಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.