ರಾಯಚೂರು. ವಸತಿ ಶಾಲೆಯಲ್ಲಿ ಬೆಳಗ್ಗೆ ಉಪಾ ಹಾರ ಸೇವಿಸಿದ್ದರಿಂದ ಮಕ್ಕಳ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ನಗರದ ಹೊರವಲಯದ ಚಂದ್ರಬಂಡಾ ರಸ್ತೆಯಲ್ಲಿ ಬರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳು ಬೆಳಗ್ಗೆ ಉಪಹಾರ ಸೇವಿಸದ್ದು 43ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥರಾ ಗಿದ್ದಾರೆ.
ಇದೀಗ ಅಸ್ವಸ್ಥಗೊಂಡ ಮಕ್ಕಳನ್ನು ನಗರದ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಆಹಾರ ಸೇವಿಸದ ವಿದ್ಯಾರ್ಥಿಗಳಿ ಫುಡ್ ಪಾಯ್ಸನ್ ಆಗಿದೆ ಎನ್ನಲಾಗಿದೆ.
ಇಂದು ಬೆಳಿಗ್ಗೆ ವಸತಿ ನಿಲಯದಲ್ಲಿ ವಿದ್ಯಾರ್ಥಿ ಗಳಿಗೆ ಪುಲಾವ್ ಉಪಹಾರ ನೀಡಲಾಗಿತ್ತು, ಆಹಾರ ಸೇವಿಸಿದ ಮಕ್ಕಳ ಆರೋಗ್ಯದಲ್ಲಿ ಏರುಪೇರಾಗಿ ವಾಂತಿ, ಹೊಟ್ಟೆ ನೋವು, ತಲೆ ನೋವು ಕಾಣಿಸಿಕೊಂಡಿದೆ. ನಂತರ ಮಕ್ಕಳನ್ನು ಚಿಕಿತ್ಸೆಗಾಗಿ ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಅಧಿಕಾರಿಗಳು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಸತಿ ಶಾಲೆಯಲ್ಲಿ ಪುಲಾವ್ ತಯಾರಿಸುವ ವೇಳೆ ಪಲಾವ್ ನಲ್ಲಿ ಹಲ್ಲಿ ಬಿದ್ದಿತ್ತು ಎಂದು ಆರೋಪಿಸಲಾಗಿದೆ.