ರಾಯಚೂರು.ಕಾಲುವೆಯಲ್ಲಿ ಬಟ್ಟೆ ತೊಳಯಲು ಹೋಗಿದ್ದ ತಾಯಿ ಹಾಗೂ ಮಗು ಕೊಚ್ಚಿ ಹೋಗಿರುವ ಘಟನೆ ತಾಲ್ಲೂಕಿನ ಬಿಚ್ಚಾಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿ.ಯದ್ಲಾಪುರ ಗ್ರಾಮದಲ್ಲಿ ನಡೆದಿದೆ.
ತಾಯಿ ಸುಜಾತಾ(33) ಮಗು ಶ್ರಾವಣಿ(11) ಎಂದು ತಿಳಿದು ಬಂದಿದೆ.
ಭಾನುವಾರ ಬೆಳಗ್ಗೆ ಸುಜಾತಾ ಅವರು ತನ್ನ ಮಗಳೊಂದಿಗೆ ಬಟ್ಟೆ ತೊಳೆಯಲು ಕಾಲುವೆಗೆ ಹೋಗಿದ್ದರು. ಮನೆಗೆ ವಾಪಸ್ ಆಗದ ಕಾರಣ ಕಾಲುವೆಯಲ್ಲಿ ಕೊಚ್ಚಿ ಹೋಗಿರಬಹುದು ಎಂದು ಅಗ್ನಿ ಶಾಮಕದಳ, ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ಸ್ಥಳಕ್ಕೆ ಆಗಮಿಸಿ ಹುಡುಕಾಟ ನಡೆಸಿದ್ದು ಸುಜಾತ ಅವರ ಶವ ಪತ್ತೆಯಾಗಿದೆ.
ಬಾಲಕಿ ಶವ ಇನ್ನೂ ಪತ್ತೆಯಾಗಿಲ್ಲ.
ಈ ಕುರಿತು ಯರಗೇರಾ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.