ರಾಯಚೂರು. ರಾಯಚೂರು ನಗರಸಭೆಯ ನೂತನ ಅಧ್ಯಕ್ಷರಾಗಿ ನರಸಮ್ಮ ನರಸಿಂಹಲು ಹಾಗೂ ಉಪಾಧ್ಯಕ್ಷರಾಗಿ ಜಹಾನಿಯ ಸಾಜೀದ ಸಮೀರ್ ಅವರು ಆವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಹಾಗೂ ಸಹಾಯಕ ಆಯುಕ್ತರಾದ ಮೈಬೂಬಿ ಅವರು ತಿಳಿಸಿದರು.
ನಗರಸಭೆ ಸಭಾಂಗಣದಲ್ಲಿಂದು ಬೆಳಗ್ಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆದಿದ್ದು, ಅಧ್ಯಕ್ಷ ಸ್ಥಾನಕ್ಕೆ ನರಸಮ್ಮ ನರಸಿಂಹಲು ನಾಮಪತ್ರ ಸಲ್ಲಿಸಿದ್ದರು, ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಜಹಾನಿಯ ಸಾಜೀದ ಸಮೀರ್ ನಾಮಪತ್ರ ಸಲ್ಲಿಸಿದ್ದರು, ಎರಡು ಸ್ಥಾನಗಳಿಗೆ ಒಂದೊಂದು ನಾಮಪತ್ರ ಸಲ್ಲಿಕೆ ಯಾದ ಕಾರಣ ಇಬ್ಬರನ್ನು ಅವಿರೋಧವಾಗಿ ಅಯ್ಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು, ಸಂಸದ ಜಿ.ಕುಮಾರ ನಾಯಕ, ವಿಧಾನ ಪರಿಷತ್ ಸದಸ್ಯ ಎ.ವಸಂತ ಕುಮಾರ್, ನಗರಸಭೆಯ ವಿವಿಧ ವಾಡ್೯ಗಳ ಸದಸ್ಯರು ಹಾಗೂ ನಗರಸಭೆಯ ಪೌರಾಯುಕ್ತ ಗುರುಸಿದ್ದಯ್ಯ ಸ್ವಾಮಿ ಹಿರೇಮಠ ಅನೇಕರು ಇದ್ದರು.