Live Stream

November 2024
S M T W T F S
 12
3456789
10111213141516
17181920212223
24252627282930

| Latest Version 9.4.1 |

State News

ಮುಂದಿನ ವರ್ಷ ಪಿಡಿಒ ಕೌನ್ಸಲಿಂಗ್ ಮೂಲಕ ವರ್ಗಾವಣೆ

ಮುಂದಿನ ವರ್ಷ ಪಿಡಿಒ ಕೌನ್ಸಲಿಂಗ್ ಮೂಲಕ ವರ್ಗಾವಣೆ

ಬೆಂಗಳೂರು. ಪಿಡಿಒ (ಪಂಚಾಯತ್‌ ಅಭಿವೃದ್ಧಿ ಅಧಿಕಾರಿ) ವರ್ಗಾವಣೆಯನ್ನು ಮುಂದಿನ ವರ್ಷದಿಂದ ಕೌನ್ಸೆಲಿಂಗ್‌ ಮೂಲಕ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದರು.

ವಿಧಾನಸಭೆಯಲ್ಲಿ ಮಂಗಳವಾರ ಕಾಂಗ್ರೆಸ್‌ನ ಎಚ್‌.ಡಿ.ರಂಗನಾಥ ಅವರ ಗಮನ ಸೆಳೆಯುವ ಸೂಚನೆಗೆ ಉತ್ತರ ನೀಡಿದ ಅವರು ಈ ವಿಷಯ ತಿಳಿಸಿದರು.

ಪಿಡಿಒಗಳು ಸಚಿವರು, ಶಾಸಕರಿಗೆ ಆಪ್ತ ಸಹಾಯಕರಾಗಲು ಒಪ್ಪಿಗೆ ಕೊಡುತ್ತಿಲ್ಲ. ಇದರಿಂದ ಗ್ರಾಮಗಳಲ್ಲಿನ ಕೆಲಸ ಕಾರ್ಯಗಳಿಗೆ ತೊಂದರೆ ಆಗುತ್ತಿದೆ. 60ರಿಂದ 70 ಜನ ಪಿಡಿಒಗಳು ಆಪ್ತ ಸಹಾಯಕರಾಗಿ ಹೋದರೆ, ದೊಡ್ಡ ಮಟ್ಟದ ಕೊರತೆ ಆಗುತ್ತದೆ. ಆದ್ದರಿಂದ ಆಪ್ತ ಸಹಾಯಕರನ್ನಾಗಿ ತೆಗೆದುಕೊಳ್ಳುವುದನ್ನು ನಿಲ್ಲಿಸುವುದು ಒಳ್ಳೆಯದು ಎಂದು ಪ್ರಿಯಾಂಕ್‌ ಹೇಳಿದರು.

ಪಿಡಿಒಗಳ ವರ್ಗಾವಣೆಯಲ್ಲಿ ಸಮಸ್ಯೆ ಆಗುತ್ತಿದೆ. ಇದನ್ನು ತಪ್ಪಿಸಲು ಕೌನ್ಸೆಲಿಂಗ್‌ ಮೂಲಕವೇ ವರ್ಗಾವಣೆ ತೀರ್ಮಾನಿಸಲಾಗಿದೆ ಎಂದು ವಿವರಿಸಿದರು.

Megha News