Live Stream

May 2025
S M T W T F S
 123
45678910
11121314151617
18192021222324
25262728293031

| Latest Version 9.4.1 |

Politics News

ಧರ್ಮದಲ್ಲಿ ರಾಜಕಾರಣ ಬೇಡ : ಬಿಎಸ್ ವೈ

ಧರ್ಮದಲ್ಲಿ ರಾಜಕಾರಣ ಬೇಡ : ಬಿಎಸ್ ವೈ

ಲಿಂಗಸುಗೂರು : ಭಾರತ ಜಾತ್ಯಾತೀತ ರಾಷ್ಟ್ರವಾಗಿದ್ದು, ಏಕತೆ ಮತ್ತು ಸಮಗ್ರತೆಗೆ ಜಗತ್ತಿನಲ್ಲೇ ಮಾದರಿಯಾಗಿದೆ. ರಾಜಕಾರಣ ಮತ್ತು ಧರ್ಮವನ್ನು ಬೆರೆಸಬಾರದು. ಧರ್ಮದಲ್ಲಿ ರಾಜಕಾರಣ ಮಾಡುವುದು ತರವಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಪಟ್ಟಣದಲ್ಲಿ ಜರುಗುತ್ತಿರುವ ಶರನ್ನವರಾತ್ರಿ ದಸರಾ ಧರ್ಮ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಾಡಿನ ಪ್ರಗತಿಗೆ ಮಠ, ಮಾನ್ಯಗಳ ಕೊಡುಗೆ ಅಪಾರವಾಗಿದೆ. ಮಠಗಳು ಮಾನವೀಯತೆಯನ್ನು ಸಾರುವ ಕೇಂದ್ರಗಳಾಗಿವೆ. ಈ ನಿಟ್ಟಿನಲ್ಲಿ ಬಾಳೆಹೊನ್ನೂರು ಶ್ರೀಗಳ ಕಾರ್ಯ ಶ್ಲಾಘನೀಯವಾಗಿದೆ. ಇಂದಿನಿಂದ ನವರಾತ್ರಿವರೆಗೂ ಜರುಗಲಿರುವ ಧರ್ಮ ಸಮ್ಮೇಳನದಲ್ಲಿ ಈ ಭಾಗದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಬದುಕನ್ನು ಸಾರ್ಥಕ ಪಡಿಸಿಕೊಳ್ಳಲು ಕರೆ ನೀಡಿದರು.

ನಾಡಿನ ಹಲವು ಹರಗುರು ಚರಮೂರ್ತಿಗಳು, ಸಂಸದರಾದ ರಾಜಾ ಅಮರೇಶ್ವರ ನಾಯಕ, ಸಂಗಣ್ಣ ಕರಡಿ, ಶಾಸಕ ಮಾನಪ್ಪ ವಜ್ಜಲ್ ಸೇರಿ ಸಹಸ್ರಾರು ಸಂಖ್ಯೆಯಲ್ಲಿ ಭಕ್ತ ಸಮೂಹ ಪಾಲ್ಗೊಂಡಿದ್ದರು.

Megha News