Live Stream

April 2025
S M T W T F S
 12345
6789101112
13141516171819
20212223242526
27282930  

| Latest Version 9.4.1 |

State News

ಶಾಲಾ ವಿದ್ಯಾರ್ಥಿಗಳಿಗೆ ವೈಜ್ಞಾನಿಕ ಮನೋಭಾವ ಉತ್ತೇಜಿಸಲು ಹೊಸ ನೀತಿ- ಎನ್ ಎಸ್ ಭೋಸರಾಜು

ಶಾಲಾ ವಿದ್ಯಾರ್ಥಿಗಳಿಗೆ ವೈಜ್ಞಾನಿಕ ಮನೋಭಾವ ಉತ್ತೇಜಿಸಲು ಹೊಸ ನೀತಿ- ಎನ್ ಎಸ್ ಭೋಸರಾಜು

ಬೆಂಗಳೂರು: ವೈಜ್ಞಾನಿಕ ಮನೋಭಾವವನ್ನ ಪ್ರೋತ್ಸಾಹಿಸಲು ಹಾಗೂ “ಎಲ್ಲರಿಗೂ ವಿಜ್ಞಾನ” ಎಂಬ ಉದ್ದೇಶವನ್ನು ಸಾಧಿಸುವ ನಿಟ್ಟಿನಲ್ಲಿ ಹೊಸ ನೀತಿಯನ್ನು ರೂಪಿಸುವಂತೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು ಅವರು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ.

ಚಂದ್ರಯಾನ – 3 ರ ಯಶಸ್ಸಿನ ನಂತರ ಮಕ್ಕಳಲ್ಲಿ ಬಾಹ್ಯಾಕಾಶದ ಬಗ್ಗೆ ಆಸಕ್ತಿ ಹೆಚ್ಚಾಗಿದೆ. ಇದಕ್ಕೆ ಪ್ರೋತ್ಸಾಹದ ಅಗತ್ಯವಿದೆ. ಈ ನಿಟ್ಟಿನಲ್ಲಿ ರಾಜ್ಯದ ಶಾಲಾ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಮತ್ತು ವಿಜ್ಞಾನದ ಕುತೂಹಲವನ್ನು ಉತ್ತೇಜಿಸುವ ಸಲುವಾಗಿ ದೂರದರ್ಶಕಗಳನ್ನ ಒದಗಿಸುವುದು ಸೂಕ್ತವಾಗಿದೆ. ಈ ನಿಟ್ಟಿನಲ್ಲಿ ಪ್ರತ್ಯೇಕ ನೀತಿ ರೂಪಿಸುವಂತೆ ಸೂಚನೆ ನೀಡಿರುವುದಾಗಿ ಸಚಿವರು ಹೇಳಿಕೆಯಲ್ಲಿ ಮಾಹಿತಿ ನೀಡಿದ್ದಾರೆ.
ಮಕ್ಕಳು ಹಾಗೂ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಆಸಕ್ತಿಯನ್ನು ಹೆಚ್ಚಿಸಲು ಯೋಜನೆ: ರಾಜ್ಯದಲ್ಲಿ 2 ಪ್ರಾದೇಶಿಕ ವಿಜ್ಞಾನ ಕೇಂದ್ರಗಳು, 2 ತಾರಾಲಯಗಳು, 08 ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರಗಳಿವೆ. 11 ಸಂಚಾರಿ ತಾರಾಲಯಗಳು ಕಾರ್ಯನಿರ್ವಹಿಸುತ್ತಿವೆ. ರಾಜ್ಯದ ವಿದ್ಯಾರ್ಥಿಗಳಲ್ಲಿ ಬಾಲ್ಯಾವಸ್ಥೆಯಿಂದಲೇ ವೈಜ್ಞಾನಿಕ ವಿಷಯಗಳಲ್ಲಿ ಆಸಕ್ತಿಯನ್ನು ಹೆಚ್ಚಿಸುವ ಉದ್ದೇಶದಿಂದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯಡಿ ನೂತನ ಯೋಜನೆಯೊಂದನ್ನು ಜಾರಿಗೊಳಿಸಲು ಚಿಂತನೆ ನಡೆಸಿದೆ ಎಂದು ಅವರು ತಿಳಿಸಿದ್ದಾರೆ.
ಈ ಯೋಜನೆಯ ಅಡಿಯಲ್ಲಿ ರಾಜ್ಯದ ಸರಕಾರಿ ಪ್ರೌಢ ಶಾಲೆಗಳಲ್ಲಿ ಟೆಲಿಸ್ಕೋಪ್ ಮತ್ತು ಮೈಕ್ರೋಸ್ಕೋಪ್ ಗಳನ್ನು ನೀಡಲು, ಹಾಗೆಯೇ, ಈ ಉಪಕರಣಗಳ ನಿರ್ವಹಣೆ ಮತ್ತು ಅವುಗಳನ್ನು ಬಳಸಿ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಲು ಶಿಕ್ಷಕರುಗಳಿಗೆ ತರಬೇತಿಯನ್ನು ನೀಡುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗಿದೆ. ಈ ನಿಟ್ಟಿನಲ್ಲಿ ಪ್ರಕ್ರಿಯೆ ಪ್ರಾರಂಭಿಸುವಂತೆ ಸಚಿವರು ಸೂಚನೆ ನೀಡಿದ್ದಾರೆ

Megha News