ರಾಯಚೂರು. ಜಿಲ್ಲೆಯನ್ನು ಬರದಿಂದ ಮುಕ್ತಗೊಳಿಸುವ ನಿಟ್ಟಿನಲ್ಲಿ ಪಿಕೆಕೆ ಸಂಸ್ಥೆಯ ಸಹಭಾಗಿತ್ವದಲ್ಲಿ ಬೋಸರಾಜು ಫೌಂಡೇಶನ್ ನಿಂದ ನ. 5 ರಂದು ಜಿಲ್ಲೆಯಲ್ಲಿ ಮೋಡ ಬಿತ್ತನೆಗೆ ಸಿದ್ದತೆ ಮಾಡಲಾಗುತ್ತಿದೆ.
ರಾಜ್ಯದಲ್ಲಿ ಈ ವರ್ಷ ಮಳೆ ಕಡಿಮೆಯಾಗಿದೆ. ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿದೆ. ಇದಕ್ಕೆ ರಾಯಚೂರು ಜಿಲ್ಲೆಯೂ ಹೊರತಾಗಿಲ್ಲ. ಮಳೆಯ ಪ್ರಮಾಣ ಕಡಿಮೆ ಆಗಿರುವುದರಿಂದ ತುಂಗಭದ್ರಾ ನಾಲೆಗಳಲ್ಲಿ ನೀರಿನ ಪ್ರಮಾಣ ಗಣನೀಯ ಇಳಿಕೆಯಾಗಿದೆ. ಈಗ ಅರ್ಧಕ್ಕೆ ಬೆಳೆದಿರುವ ಬೆಳೆಗಳನ್ನು ರಕ್ಷಣೆ ಮಾಡಿಕೊಳ್ಳುವ ನಿಟ್ಟಿನಲ್ಲಿ ವೈಜ್ಞಾನಿಕ ಕ್ರಮಗಳನ್ನು ಅನುಸರಿಸಿ ಮಳೆ ಸುರಿಸುವ ನಿಟ್ಟಿನಲ್ಲಿ ಮೋಡ ಬಿತ್ತನೆಯ ಕಾರ್ಯವನ್ನು ಹಮ್ಮಿಕೊಳ್ಳಲಾಗುತ್ತದೆ. ಮೋಡ ಬಿತ್ತನೆಯ ಕಾರ್ಯವನ್ನ ಪಿಕೆಕೆ ಸಂಸ್ಥೆಯ ಸಹಯೋಗದಿಂದ ಭೋಸರಾಜು ಫೌಂಡೇಶನ್ ಹಮ್ಮಿಕೊಳ್ಳುತ್ತಿದೆ.
ಬರ ಪರಿಸ್ಥಿತಿಯನ್ನು ನಿವಾರಿಸಿ, ನೀರಿನ ಲಭ್ಯತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಮೋಡ ಬಿತ್ತನೆ ಬಹಳ ಪರಿಣಾಮಕಾರಿ. ಅತ್ಯಾಧುನಿಕ ತಂತ್ರಜ್ಞಾನ ಉಪಯೋಗಿಸಿ ನಡೆಸುವ ಮೋಡ ಬಿತ್ತನೆಯು ಮಳೆಯನ್ನು ಸುರಿಸುವಲ್ಲಿ ಕೆಲಸ ಮಾಡಲಾಗುತ್ತದೆ. ಜಿಲ್ಲೆಯಲ್ಲಿ ಮೋಡ ಬಿತ್ತನೆಯ ಮೂಲಕ ಜಿಲ್ಲೆಯ ರೈತರಿಗೆ ಅನುಕೂಲ ಮಾಡು ವುದು ಇದರ ಉದ್ದೇಶವಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ರಾದ ಎನ್.ಎಸ್ ಭೋಸರಾಜು ತಿಳಿಸಿದ್ದಾರೆ.