Live Stream

July 2025
S M T W T F S
 12345
6789101112
13141516171819
20212223242526
2728293031  

| Latest Version 9.4.1 |

Local News

ಸೆ.14ರಂದು ರಾಷ್ಟ್ರೀಯ ಲೋಕ ಅದಾಲತ್ ಆಯೋಜನೆ: ನ್ಯಾ.ಹೆಚ್.ಎ.ಸಾತ್ವಿಕ್

ಸೆ.14ರಂದು ರಾಷ್ಟ್ರೀಯ ಲೋಕ ಅದಾಲತ್ ಆಯೋಜನೆ: ನ್ಯಾ.ಹೆಚ್.ಎ.ಸಾತ್ವಿಕ್

ರಾಯಚೂರು. ಜಿಲ್ಲಾ ಮತ್ತು ತಾಲೂಕು ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂದಾನದ ಮೂಲಕ ಬಗೆಹರಿಸಲು ಸೆ.14ರಂದು ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದೆ ಎಂದು ಹಿರಿಯ ಶ್ರೇಣಿ ದಿವಾನಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹೆಚ್.ಎ.ಸಾತ್ವಿಕ್ ಅವರು ತಿಳಿಸಿದ್ದಾರೆ.

ನಗರದ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀ ಶರ ಕಚೇರಿಯಲ್ಲಿ ಹಮ್ಮಿಕೊಳ್ಳಲಾದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲಾ ಮತ್ತು ತಾಲೂಕು ನ್ಯಾಯಾಲಯಗಳಲ್ಲಿ ಒಟ್ಟು 33,704 ಪ್ರಕರಣಗಳು ವಿಚಾರಣೆಗೆ ಬಾಕಿಯಿವೆ. ಈ ಪೈಕಿ 16,288 ಸಿವಿಲ್ ಪ್ರಕರಣಗಳು ಹಾಗೂ 17,416 ಕ್ರಿಮಿನಲ್ ಪ್ರಕರಣಗಳಾಗಿವೆ. ಇವುಗಳಲ್ಲಿ 4,428 ಪ್ರಕರಣಗಳು ಇತ್ಯರ್ಥವಾಗುವ ಸಾಧ್ಯತೆ ಯಿದೆ. ಈಗಾಗಲೆ 2,178 ಪ್ರಕರಣಗಳನ್ನು ರಾಜಿ ಆಗುವ ಸಾಧ್ಯತೆ ಇರುವ ಪ್ರಕರಣಗಳು ಎಂದು ಗುರುತಿಸಲಾಗಿದೆ ಎಂದರು.
ಮೋಟಾರು ವಾಹನ ಅಪಘಾತಕ್ಕೆ ಸಂಬAಧಿಸಿದ 15 ಪ್ರಕರಣಗಳು, ರಾಜಿಯಾಗಬಹುದಾದ 49 ಕ್ರಿಮಿನಲ್ ಪ್ರಕರಣಗಳು, 219 ಚೆಕ್ ಬೌನ್ಸ್ ಪ್ರಕರಣಗಳಿವೆ. ಇದರೊಂದಿಗೆ ತೆರಿಗೆ ಪಾವತಿಸ ದಿರುವ ಪ್ರಕರಣಗಳಲ್ಲಿ ತೆರಿಗೆ ಸಂಗ್ರಹವನ್ನೂ ಮಾಡಲಾಗುತ್ತಿದೆ. ವಿಚ್ಚೇಧನಕ್ಕೆ ಅರ್ಜಿ ಸಲ್ಲಿಸಿ ರುವವರ ಮನವೊಲಿಸಿ ಒಂದಾಗಿ ಬಾಳುವಂತೆ ಮಾಡಲಾಗುವುದು ಎಂದು ತಿಳಿಸಿದರು.

ನ್ಯಾಯಾಲಯ ಶುಲ್ಕ ವಾಪಸ್ಸು:
ಲೋಕ ಅದಾಲತ್ನಿಂದ ವ್ಯಾಜ್ಯವನ್ನು ಅತ್ಯಂತ ಕಡಿಮೆ ಖರ್ಚಿನಲ್ಲಿ, ಶೀಘ್ರವಾಗಿ ಪರಿಹ ರಿಸಿಕೊಳ್ಳಬಹುದು. ಇಲ್ಲಿ ರಾಜಿಯಾದ ಪ್ರಕರಣಗಳಲ್ಲಿ ಮಾಡಿದ ಆದೇಶಕ್ಕೆ ನ್ಯಾಯಾಲಯದಲ್ಲಿ ಇತ್ಯರ್ಥ ಪಡಿಸುವ ಪ್ರಕರಣದಲ್ಲಿ ನೀಡಿದ ಆದೇಶದಷ್ಟೇ ಮಹತ್ವ ಇರುತ್ತದೆ. ಸಮಯ ಉಳಿಯುವ ಜತೆಗೆ ಕಕ್ಷಿದಾರರ ನಡುವಿನ ಸಂಬಂಧ ಚೆನ್ನಾಗಿ ಉಳಿಯುತ್ತದೆ. ಯಾವುದೇ ಕೋರ್ಟ್ ಫೀಸ್ ಕಟ್ಟಬೇಕಿಲ್ಲ. ಪ್ರಕರಣ ರಾಜಿಯಾದಲ್ಲಿ ಶೇ.100ರಷ್ಟು ನ್ಯಾಯಾಲಯ ಶುಲ್ಕ ಹಿಂದಿರುಗಿಸಲಾಗುವುದು. ಲೋಕ ಅದಾಲತ್ ಅವಾರ್ಡ್ (ತೀರ್ಪು) ವಿರುದ್ಧ ಮೇಲ್ಮನವಿಗೆ ಅವಕಾಶವಿರುವುದಿಲ್ಲ ಎಂದರು.

Megha News