ರಾಯಚೂರು. ಜಿಲ್ಲಾಡಳಿತ ವತಿಯಿಂದ ವೀರವನಿತೆ ಒನಕೆ ಓಬವ್ವ ಜಯಂತಿ ಕಾರ್ಯಕ್ರಮಕ್ಕೆ ಅಧಿಕಾರಿಗಳಿಲ್ಲದೆ ನಿರ್ಲಕ್ಷ್ಯ ವಹಿಸಿದ ಜಿಲ್ಲಾಡಳಿತ ವಿರುದ್ಧ ಸಮುದಾಯದ ಮತ್ತು ದಲಿತ ಪರ ಸಂಘಟನೆಗಳ ಮುಖಂಡರು ಕನ್ನಡ ಭವನದ ವೇದಿಕೆಯಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಕನ್ನಡ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಶಿಷ್ಠಾಚಾರದ ಪ್ರಕಾರ ಆಮಂತ್ರಣ ಪತ್ರಿಕೆ ಹೊರಡಿಸಿದ್ದು ಕನಿಷ್ಠ ಶಾಸಕರು, ಜಿಲ್ಲಾಡಳಿತದ ಅಧಿಕಾರಿಗಳು ಸೇರಿ ಜಿಲ್ಲಾ ಮಟ್ಟದ ಅಧಿಕಾರಿಗಳಿಲ್ಲ, ಜಿಲ್ಲಾಡಳಿತ ವತಿಯಿಂದ ನಡೆಯುತಿರುವ ಕಾರ್ಯಕ್ರಮಕ್ಕೆ ಸಿದ್ದತೆ ಮಾಡಲಾಗಿದೆ, ಆದರೆ ಯಾವೊಬ್ಬ ಅಧಿಕಾರಿಗಳು ಇಲ್ಲ ಕೇವಲ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳು ಮಾತ್ರ ಭಾಗವಹಿಸಿದ್ದು, ಜಿಲ್ಲಾಧಿಕಾರಿಗಳು, ನಗರಸಭೆ ಪೌರಾಯಕ್ತರು ಭಾಗವಹಿಸಿದೇ ನಿರ್ಲಕ್ಷ್ಯ ವಹಿಸಿ ಸಮುದಾಯವನ್ನು ಕಡೆಗಣಿಸಿದ್ದಾರೆ, ಜಿಲ್ಲಾಧಿಕಾರಿಗಳು, ಹಾಗೂ ನಗರಸಭೆ ಪೌರಾಯಕ್ತರು ಆಗಮಿಸುವವರೆಗೆ ಪ್ರತಿಭಟನೆ ನಡೆಸಲಾಗುತ್ತದೆ ಎಂದು ತಿಳಿಸಿದರು.