ಮಾನ್ವಿ: ಪಟ್ಟಣದ ವ್ಯಕ್ತಿಯೊಬ್ಬರಿಗೆ ಶುಕ್ರವಾರ ಕೋವಿಡ್ ದೃಢಪಟ್ಟಿದೆ. ಅವರು ಮೂರು ದಿನಗಳ ಹಿಂದೆ ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಗಾಗಿದ್ದರು ಎಂದು ತಿಳಿದುಬಂದಿದೆ.
ಈ ಕುರಿತು ಖಚಿತ ಮಾಹಿತಿ ನೀಡಿದ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಶರಣಬಸವರಾಜ ಗೌಡ ಮುಷ್ಟೂರು, ‘ಮಾನ್ವಿ ಪಟ್ಟಣದ ವ್ಯಕ್ತಿಗೆ ಕೋವಿಡ್ ದೃಢಪಟ್ಟಿದ್ದು 14 ದಿನಗಳವರೆಗೆ ಹೋಮ್ ಕ್ವಾರಂಟೈನ್ಗೆ ಸೂಚಿಸಲಾಗಿದೆ.
ಶನಿವಾರ ಸ್ಥಳೀಯ ವೈದ್ಯರ ತಂಡ ಕೋವಿಡ್ ಪೀಡಿತ ವ್ಯಕ್ತಿಯ ಮನೆಗೆ ತೆರಳಿ ಕುಟುಂಬ ಸದಸ್ಯರ ತಪಾಸಣೆ ಮಾಡುತ್ತದೆ. ಸಂಪರ್ಕಿತರ ಮಾಹಿತಿ ಪಡೆಯಲಾಗುವುದು’ ಎಂದು ತಿಳಿಸಿದರು.