ರಾಯಚೂರು. ಕೋಲ್ಕತ್ತಾದಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲಿನ ನಡೆದ ಅತ್ಯಾಚಾರ ಮತ್ತು ಹತ್ಯೆ ಘಟನೆ ಖಂಡಿಸಿ ಖಾಸಗಿ ಆಸ್ಪತ್ರೆಗಳ ಒಪಿಡಿ ಬಂದ್ ಮಾಡಿ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿವೆ.
ನಗರದ ಪೇಟ್ಲಾ ಬ್ರಿಜ್ ನಲ್ಲಿರುವ ಖಾಸಗಿ ಆಸ್ಪತ್ರೆ ಕ್ಲಿನಿಕ್‌ಗಳು, ಸೇರಿದಂತೆ ನಗರದಲ್ಲಿರುವ ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ಇಂದು ಬೆಳಗ್ಗೆ 6 ಗಂಟೆಯಿಂದ ನಾಳೆ ಬೆಳಗ್ಗೆ 6 ಗಂಟೆಯವರೆಗೆ ಖಾಸಗಿ ಒಪಿಡಿ ಬಂದ್ ಮಾಡಿ ಪ್ರತಿಭಟನೆಗೆ ಬೆಂಬಲಸಿವೆ.
ಭಾರತೀಯ ವೈದ್ಯಕೀಯ ಸಂಘ ರಾಷ್ಟ್ರವ್ಯಾಪಿ 24 ಗಂಟೆಗಳ ಮುಷ್ಕರ ನಡೆಸಲು ಕರೆ ನೀಡಿದ್ದ ರಿಂದ ದೇಶದೆಲ್ಲೆಡೆ ವೈದ್ಯರು 24 ಗಂಟೆಗಳ ಕಾಲ ಮುಷರ ನಡೆಸುತ್ತಿದ್ದಾರೆ. ನಗರದ ಎಲ್ಲ ಆಸ್ಪತ್ರೆ ಗಳಲ್ಲಿ ತುರ್ತು ಸೇವೆ ಹೊರತುಪಡಿಸಿ ಬೇರೆ ಯಾವುದೇ ಸೇವೆ ಇಂದು ಇರುವುದಿಲ್ಲ ಎನ್ನಲಾಗಿದೆ. ಖಾಸಗಿ ಆಸ್ಪತ್ರೆಯಲ್ಲಿ ಒಪಿಡಿ ಬಂದ್ ಆಗಿದ್ದರಿಂದ ಸಾರ್ವಜನಿಕರಿಗೆ ಸಾಕಷ್ಟು ತೊಂದರೆ ಅನುಭವಿಸಿದರು. ಗ್ರಾಮೀಣ ಭಾಗದಿಂದ ಬಂದ ಜನರು ಕ್ಲಿನಿಕ್ ಬಂದ್‌ನಿಂ ದಾಗಿ ಪರದಾಡುವಂತಾಗಿದೆ. ಸಾರ್ವಜನಿಕರಿಗೆ ಪೂರ್ವಪರ ಮಾಹಿತಿ ಇಲ್ಲದೆ ಚಿಕಿತ್ಸೆ ಬಂದವರು ಮರಳಿ ತೆರಳುವಂತಾಯಿತು.
ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬಂದಿಗಳಿಗೆ ಸೂಕ್ತ ಭದ್ರತೆ, ಜೊತೆಗೆ ಟ್ರೈನಿ ವೈದ್ಯೆ ಅತ್ಯಾಚಾರ ಮತ್ತು ಹತ್ಯೆ ಖಂಡಿಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿ ದೇಶವ್ಯಾಪಿ ಪ್ರತಿಭಟನೆ ನಡೆಸಲಾಗುತ್ತಿದೆ.