ರಾಯಚೂರು. 2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯದ 195 ತಾಲೂಕುಗಳನ್ನು ಬರಪೀಡಿತ ಎಂದು ರಾಜ್ಯ ಸರ್ಕಾರ ಅಧಿಕೃತ ವಾಗಿ ಘೋಷಿಸಿದೆ.
ರಾಜ್ಯದ 31 ಜಿಲ್ಲೆಗಳ 236 ತಾಲ್ಲೂಕುಗಳ ಪೈಕಿ, 195 ತಾಲೂಕುಗಳನ್ನು ಬರಪೀಡಿತ ಎಂದು ರಾಜ್ಯ ಸರ್ಕಾರ ಅಧಿಕೃತವಾಗಿ ಘೋಷಿಸಿದ್ದು, ರಾಯಚೂರು ಜಿಲ್ಲೆಯಲ್ಲಿ ಒಟ್ಟು 6 ತಾಲೂಕುಗಳನ್ನು ಬರಪೀಡಿತ ತಾಲೂಕು ಎಂದು ಘೋಷಿಸಿದ್ದು, ಇದರಲ್ಲಿ ತೀವ್ರ ಬರಪೀಡಿತ ತಾಲೂಕುಗಳಾದ ಲಿಂಗಸುಗೂರು, ಮಾನ್ವಿ, ರಾಯಚೂರು ಶಿರವಾರ ಹಾಗೂ ದೇವದುರ್ಗ ಮತ್ತು ಮಸ್ಕಿ ತಾಲೂಕುಗಳನ್ನು ಸಾಧಾರಣ ಬರ ಪೀಡಿತ ತಾಲೂಕುಗಳೆಂದು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆರು ತಿಂಗಳ ಅವಧಿಗೆ ಅಥವಾ ಮುಂದಿನ ಆದೇಶದ ವರೆಗೂ ಬರ ಪೀಡಿತ ಎಂದು ಘೋಷಿಸಲಾಗಿದೆ.
ಸಂಬಂಧ ಪಟ್ಟ ಜಿಲ್ಲಾಧಿಕಾಧಿಕಾರಿಗಳು ಬರ ನಿರ್ವಹಣೆ ಕಾರ್ಯಕ್ರಮ ಕೈಗೊಳ್ಳಲು ಸರ್ಕಾರದಿಂದ ಕಾಲಕಾಲಕ್ಕೆ ರಾಷ್ಟ್ರೀಯ ವಿಪತ್ತು ನಿರ್ವಹಣೆ ಹಾಗೂ ರಾಜ್ಯ ವಿಪತ್ತು ನಿರ್ವಹಣೆ ನಿಯಮಗಳ ಅನ್ವಯ ಮಾರ್ಗಸೂಚಿಗಳನ್ನು ನೀಡಲಾಗುವುದು ಎಂದು ಸರ್ಕಾರ ಹೊರಡಿಸಿರುವ ಅಧಿಕೃತ ಆದೇಶದಲ್ಲಿ ತಿಳಿಸಲಾಗಿದೆ.