Live Stream

July 2025
S M T W T F S
 12345
6789101112
13141516171819
20212223242526
2728293031  

| Latest Version 9.4.1 |

Crime News

ಫೋಕೋ ಪ್ರಕರಣ: ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ಅತ್ಯಾಚಾರ ಆರೋಪಿತನಿಗೆ 20 ವರ್ಷ ಕಾರಾಗೃಹ ಶಿಕ್ಷೆ

ಫೋಕೋ ಪ್ರಕರಣ: ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ಅತ್ಯಾಚಾರ ಆರೋಪಿತನಿಗೆ 20 ವರ್ಷ ಕಾರಾಗೃಹ ಶಿಕ್ಷೆ

ಸಿಂಧನೂರು. ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಫೆಬ್ರವರಿ-2020ರ ಫೆಬ್ರವರಿಯಲ್ಲಿ ನಡೆದ ಇಬ್ಬರು ಅಪ್ರಾಪ್ತ ವಯಸ್ಸಿನ ಬಾಲಕಿ ಯರ ಮೇಲಿನ ಲೈಂಗಿಕ ದೌರ್ಜನ್ಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಂಧನೂರಿನ 3ನೇ ಅಧಿಕ ಜಿಲ್ಲಾ ಮತ್ತು ಸತ್ರ (ಪೋಸ್ಕೊ ವಿಶೇಷ) ನ್ಯಾಯಾಲಯದ ನ್ಯಾಯಾದೀಶರು ಆರೋಪಿ ತನ ಮೇಲಿನ ಅಪಾದನೆ ಸಾಬೀತಾಗಿರುವು ದರಿಂದ 20 ವರ್ಷಗಳ ಕಾರಗೃಹ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ‌.

ಸಿಂಧನೂರು ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಆರ್.ಹೆಚ್.ಕ್ಯಾಂಪ್ ನಂ.2 ರಲ್ಲಿ ಆರೋಪಿ ಅರುಣ್ ರಾಯ್( 50) ವರ್ಷ ಶಿಕ್ಷೆಗೆ ಗುರಿಯಾದ ಆರೋಪಿಯಾಗಿದ್ದಾನೆ.
ನೊಂದ ಅಪ್ರಾಪ್ತ ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ಆರೋಪಿತನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಕೆ ನಡೆಸಿದ ಅಂದಿನ ವೃತ್ತ ನಿರೀಕ್ಷಕ ಬಾಲಚಂದ್ರ ಡಿ. ಲಕ್ಕಂ ಇವರು ಆರೋಪಿತನ ವಿರುದ್ಧ ನ್ಯಾಯಾಲ ಯದಲ್ಲಿ ದೋಷಾರೋಪಣೆ ಪತ್ರ ಸಲ್ಲಿಸಿದ್ದರು.
ಪ್ರಕರಣದಲ್ಲಿ ಆರೋಪಿತನು ಇಬ್ಬರು ಅಪ್ರಾಪ್ತ ವಯಸ್ಸಿನ ಬಾಲಕಿಯರ ಮೇಲೆ ಲೈಂಗಿಕ ಅತ್ಯಾಚಾರ ವೆಸಗಿದ್ದು, ನ್ಯಾಯಾಲಯವು ಸಾಕ್ಷಿಪುರಾವೆಗಳನ್ನು ಆಧರಿಸಿ, ಆರೋಪಿತನು ಎಸಗಿರುವ ಆರೋಪವು ಸಾಭೀತಾಗಿದ್ದರಿಂದ ಆರೋಪಿತನಿಗೆ 20 ವರ್ಷಗಳ ಕಾರಾಗೃಹ ವಾಸ ಮತ್ತು 25,000 ದಂಡವನ್ನು ವಿಧಿಸಿದೆ. ಮತ್ತು ಸರ್ಕಾರದ ಸಂತ್ರಸ್ತರ ಪರಿಹಾರ ನಿಧಿಯಿಂದ ಬಾದಿತ ಬಾಲಕಿಯರಿಗೆ ತಲಾ ಒಬ್ಬೊಬ್ಬರಿಗೆ ರೂ.7 ಲಕ್ಷ 50 ಸಾವಿರ ರೂ. ಪರಿಹಾರವನ್ನು ನೀಡಬೇಕೆಂದು ಸಿಂಧನೂರಿನ 3ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಿ.ಬಿ. ಜಕಾತಿ ರವರು ತೀರ್ಪು ನೀಡಿದ್ದಾರೆ.
ಸಾಕ್ಷಿದಾರರನ್ನು ಹಾಜರುಪಡಿಸುವಲ್ಲಿ ಪೇದೆಯಾದ ರವಿಕುಮಾರ್ ಪ್ರಮುಖ ಪಾತ್ರ ವಹಿಸಿದ್ದು, ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಎಂ.ಮಂಜುನಾಥ ರವರು ವಾದ ಮಂಡಿಸಿದ್ದರು.

Megha News