ರಾಯಚೂರು. ಚೀನಾದಲ್ಲಿ ನ್ಯುಮೋನಿಯಾ ಪ್ರಕರಣ ಹೆಚ್ಚಳ ಹಿನ್ನೆಲೆ ಕರ್ನಾಟಕದ ರಾಯ ಚೂರು ಜಿಲ್ಲೆಯಲ್ಲೈ ಮುನ್ನೆಚ್ಚರಿಕಾ ಕ್ರಮ ತೆಗೆದು ಕೊಳ್ಳಲಾಗಿದೆ.
ಚೀನಾದಲ್ಲಿ ನ್ಯುಮೋನಿಯಾ ಪ್ರಕರಣ ಹೆಚ್ಚಳ ವಿಚಾರ ಬಹಿರಂಗವಾಗುತ್ತಿದ್ದಂತೆ ರಾಯಚೂರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ವೈದ್ಯರ ಜೊತೆ ಸಭೆ ನಡೆಸಿದ್ದಾರೆ.
ಇನ್ನು ಸಭೆಯಲ್ಲಿ ಎಚ್ಚರಿಕೆ ಕ್ರಮಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಬಳಿಕ ಡಿಎಚ್‌ಓ ಅವರು ಪ್ರತಿ ಕ್ರಿಯಿಸಿ, ಚಳಿಗಾಲದಲ್ಲಿ ಬರುವಂತ ವೈರಸ್ ಇದಾಗಿದೆ. ಸಾರ್ವಜನಿಕರು ಗುಂಪು ಗುಂಪಾಗಿ ಇರಬಾರದು. ಮುನ್ನೆಚ್ಚರಿಕಾ ಕ್ರಮವಾಗಿ ಅರೋ ಗ್ಯ ಇಲಾಖೆ ಎಲ್ಲಾ ಸಿದ್ದತೆ ಮಾಡಿಕೊಂಡಿದೆ ಎಂದಿದ್ದಾರೆ.
ಅಲ್ಲದೇ ನ್ಯುಮೋನಿಯಾ ದೇಹಗಳಲ್ಲಿ 5-7 ದಿನಗಳವರೆಗೆ ಇರುತ್ತದೆ. ಚಿಕ್ಕ ಮಕ್ಕಳು, ವೃದ್ಧರು , ಗರ್ಭಿಣಿಯರು ಎಚ್ಚರಿಕೆಯಿಂದ ಇರಬೇಕು. ಹೊಸ ಸೊಂಕು ಹೆದರಿಸೊಕ್ಕೆ ಎಲ್ಲಾ ಆಸ್ಪತ್ರೆಗಳಿಗೆ ಸೂಚನೆ ಡಿ ಎಚ್‌ಓ ಎಚ್ಚರಿಕೆಯನ್ನು ನೀಡಿದ್ದಾರೆ.