Live Stream

June 2025
S M T W T F S
1234567
891011121314
15161718192021
22232425262728
2930  

| Latest Version 9.4.1 |

State News

PSI ಪರೀಕ್ಷೆ ಡಿ‌.23ಕ್ಕೆ ಮುಂದೂಡಿಕೆ

PSI ಪರೀಕ್ಷೆ ಡಿ‌.23ಕ್ಕೆ ಮುಂದೂಡಿಕೆ

ಬೆಂಗಳೂರು: ಇದೇ ಡಿಸೆಂಬರ್​ 23ಕ್ಕೆ ನಿಗದಿಯಾಗಿದ್ದ 545 PSI ಹುದ್ದೆಗಳ ಮರು ಪರೀಕ್ಷೆಯನ್ನು ಒಂದು ತಿಂಗಳ ಕಾಲ ಮುಂದೂಡಲಾಗಿದ್ದು, ಜನವರಿ 23ಕ್ಕೆ ಪರೀಕ್ಷೆ ನಡೆಯಲಿದೆ.

ಇಂದಿನಿಂದ ಚಳಿಗಾಲ ಅಧಿವೇಶನ ಆರಂಭವಾ ಗಿದ್ದು, ಬೆಳಗಾವಿಯ ಸುವರ್ಣಸೌಧದಲ್ಲಿ ಗೃಹ ಸಚಿವ ಡಾ.ಜಿ. ಪರಮೇ ಲಶ್ವರ್​ ಅವರು ಪರೀಕ್ಷೆ ಮುಂದೂಡಿರುವುದಾಗಿ ಘೋಷಿಸಿದರು. ಮರು ಪರೀಕ್ಷೆಯನ್ನು ಮುಂದೂಡುವಂತೆ ಆಡಳಿತ ಮತ್ತು ವಿಪಕ್ಷಗಳ ಸದಸ್ಯರು ಆಗ್ರಹಿಸಿದ ಹಿನ್ನೆಲೆ ಯಲ್ಲಿ ಡಿ.23ರಿಂದ ಜ. 23ಕ್ಕೆ ಮುಂದೂಡಿರು ವುದಾಗಿ ಪರಮೇಶ್ವರ್​ ಮಾಹಿತಿ ನೀಡಿದರು.

ಪೊಲೀಸ್​ ನೇಮಕಾತಿಯಲ್ಲಿನ ಅಕ್ರಮ ಬೆಳಕಿಗೆ ಬಂದ ಬಳಿಕ ಇಡೀ ನೇಮಕಾತಿಯೇ ರದ್ದಾಗಿತ್ತು. ಮರು ಪರೀಕ್ಷೆ ನಡೆಸಬೇಕೆಂಬ ಸರ್ಕಾರದ ಕೂಗಿಗೆ ಹೈಕೋರ್ಟ್​ ಗ್ರೀನ್​ ಸಿಗ್ನಲ್​ ನೀಡಿತು. ಇದರ ಬೆನ್ನಲ್ಲೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಮರು ಪರೀಕ್ಷಾ ದಿನಾಂಕವನ್ನು ನ.22 ರಂದು ಪ್ರಕಟಿಸಿ, ಡಿ.23ಕ್ಕೆ ನಿಗದಿ ಮಾಡಿತ್ತು, ಆದರೆ, ಅನೇಕರು ಆಕ್ಷೇಪ ವ್ಯಕ್ತಪಡಿಸಿದ್ದರು. ಅಲ್ಲದೆ, ದಿನಾಂಕ ಮುಂದೂಡಬೇಕೆಂಬ ಕೂಗು ಗಳು ಕೇಳಿಬಂದಿದ್ದವು. ಇಂದು ಸದನದಲ್ಲೂ ಇದೇ ಆಗ್ರಹಗಳು ಕೇಳಿಬಂದ ಹಿನ್ನೆಲೆಯಲ್ಲಿ ಗೃಹ ಸಚಿವ ಪರಮೇಶ್ವರ್​ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಜ. 23ಕ್ಕೆ 545 PSI ಹುದ್ದೆಗಳ ಮರು ಪರೀಕ್ಷೆಯನ್ನು ಮುಂದೂಡಿದ್ದಾರೆ.

Megha News