Live Stream

June 2025
S M T W T F S
1234567
891011121314
15161718192021
22232425262728
2930  

| Latest Version 9.4.1 |

Local News

ಎ.17 ರಂದು ರಾಯಚೂರಿನಲ್ಲಿ ಪವರ್ ಸ್ಟಾರ್ ಪವನ್ ಕಲ್ಯಾಣ್ ಬಿಜೆಪಿ ಪರ ಪ್ರಚಾರ

ಎ.17 ರಂದು ರಾಯಚೂರಿನಲ್ಲಿ ಪವರ್ ಸ್ಟಾರ್ ಪವನ್ ಕಲ್ಯಾಣ್ ಬಿಜೆಪಿ ಪರ ಪ್ರಚಾರ

ರಾಯಚೂರು. ತೆಲುಗು ಚಿತ್ರನಟ ಪವರ್ ಸ್ಟಾರ್ ಹಾಗೂ ಜನಸೇನಾ ಪಕ್ಷದ ಸಂಸ್ಥಾಪಕ ಪವನ್ ಕಲ್ಯಾಣ್ ಅವರನ್ನು ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಪರ ಪ್ರಚಾರ ಮಾಡಲಿದ್ದಾರೆ.

ಲೋಕಸಭಾ ಚುನಾವಣೆ ಹಿನ್ನೆಲೆ, ಏಪ್ರಿಲ್‌ 17 ರಂದು ರಾಜ್ಯದಲ್ಲಿ ನಟ ಪವನ್ ಕಲ್ಯಾಣ್ ಬಿಜೆಪಿ ಅಭ್ಯರ್ಥಿಗಳ ಪರ ಭರ್ಜರಿ ಕ್ಯಾಂಪೇನ್ ನಡೆಸಲು ಮುಂದಾಗಿದ್ದಾರೆ‌.
ರಾಯಚೂರು, ಬಳ್ಳಾರಿ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ರೋಡ್ ಶೋ ನಡೆಸುವ ಮೂಲಕ ಅಭ್ಯರ್ಥಿಗಳ ಪರ ಮತಯಾಚನೆ ಮಾಡಲಿದ್ದಾರೆ.
ಗಡಿ ಜಿಲ್ಲೆ ರಾಯಚೂರು ಆಂಧ್ರಪ್ರದೇಶದ ಜೊತೆ ನಂಟು ಹೊಂದಿದ್ದರಿಂದ, ತೆಲುವು ಭಾಷೆ ಅಭಿ ಮಾನಿಗಳು ಹಾಗೂ ನಟ ಪವನ್ ಕಲ್ಯಾಣ ಅಭಿ ಮಾನಿಗಳು ರಾಯಚೂರು ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ‌. ಹೀಗಾಗಿ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ್ ಪರ ಪ್ರಚಾರ ನಡೆಸುವ ಮೂಲಕ ಮತದಾರರನ್ನಯ ಸೆಳೆಯುವ ಪ್ರಯತ್ನ ಮಾಡಲಿದ್ದಾರೆ.
ನಟ ಪವನ್ ಕಲ್ಯಾಣ್ ರೋಡ್ ಶೋ ನಡೆಸುವ ಮೂಲಕ ಮತಯಾಚಿಸಿ ಮತದಾರರನ್ನು ಸೆಳೆಯಲಿದ್ದಾರೆ.
ಎ‌ಪ್ರೀಲ್ 17 ರಂದು ಬೆಳಗ್ಗೆ 10:30ಕ್ಕೆ ನಗರದ ಯರಮರಸ್ ಹೆಲಿಪ್ಯಾಡ್‌ಗೆ ಆಗಮಿಸಿ, ನಂತರ ಗಂಜ್ ವೃತ್ತದಿಂದ ಆರ್‌ಟಿಒ ವೃತ್ತದವರೆಗೆ ರೂಡ್ ಶೋ ನಡೆಸಲಿದ್ದಾರೆ‌. ನಂತರ ಬಳ್ಳಾರಿ ಜಿಲ್ಲೆಗೆ ತೆರಳಲಿದ್ದಾರೆ‌‌

Megha News