ರಾಯಚೂರು. ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಲೆಕ್ಕ ಸಹಾಯಕರನ್ನು ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಪ್ರಧಾನ ನಿರ್ದೇಶಕರು ವರ್ಗಾವಣಿಗೊಳಿಸಿ ಆದೇಶ ಹೊರಡಿಸಿದ್ದಾರೆ.
ರಾಯಚೂರಿನ ಕಾರ್ಯಪಾಲಕ ಇಂಜಿನಿಯರ್ ನಂ5 ಕಾಲುವೆ ವಿಭಾಗ, ಯರಮರಸ್ ಇಲ್ಲಿ ಖಾಲಿಯಿರುವ ಲೆಕ್ಕ ಸಹಾಯಕರ ಹುದ್ದೆಗೆ ವಿಜಯನಗರ ಜಿಲ್ಲೆಯ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರವೀಣ್ ಕುಮಾರ ಕೆ.ಸಿ ಇವರನ್ನು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.
ಪ್ರಸ್ತುತ ಕಾರ್ಯನುರ್ವಹಿಸುತ್ತಿರುವ ಕಚೇರಿಯಿಂದ ಕರ್ತವ್ಯ ಮುಕ್ತಗೊಂಡು ವರ್ಗಾಯಿಸಿ ನಿಯೋಜಿಸಿರುವ ಕಚೇರಿಯಲ್ಲಿ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಿದೆ.