ರಾಯಚೂರು. ದೇಶದಲ್ಲಿ 75 ವರ್ಷಗಳ ಆಡಳಿತ ನಡೆಸಿದ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿಗೆ ಆಧ್ಯತೆ ನೀಡದೇ, ಗಾಂಧಿ ಕುಟುಂಬ ಆಡಳಿತಕ್ಕೆ ಸೀಮಿತವಾಗಿತ್ತು, ಆದರೆ, ಜನರು ಇದಕ್ಕೆ ಬೇಸತ್ತು ದೇಶದ ಅಭಿವೃದ್ಧಿಗೆ ಪಟತೊಟ್ಟಿರುವ ನರೇಂದ್ರ ಮೋದಿ ಅವರನ್ನು ಪ್ರಧಾನಿಯನ್ನಾಗಿ ಮಾಡಿದ್ದು, 9 ವರೆ ವರ್ಷಗಳಲ್ಲಿ ಜಗತ್ತಿನ ಎಲ್ಲಾ ದೇಶಗಳು ಹಿಂತಿರುಗಿ ನೋಡುವಂತೆ ಅಭಿವೃದ್ಧಿ ಪರ್ವ ನಡೆಸಿದ್ದಾರೆ, ಇದೀಗ ಮತ್ತೊಮ್ಮೆ ಮೋದಿ ಪ್ರಧಾನಿ ಮಂತ್ರಿಯನ್ನಾಗಿ ಮಾಡಲು ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಗೆಲ್ಲಿಸುವ ಮೂಲಕ ಮತದಾರ ಪ್ರಭುಗಳು ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಬಿಜೆಪಿ ರಾಜ್ಯಾದ್ಯಕ್ಷ ಬಿವೈ.ವಿಜಯೇಂದ್ರ ಹೇಳಿದರು.
ನಗರದ ಗಂಜ್ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡ ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು,
ರಾಜ್ಯದಲ್ಲಿ ಮೊದಲ ಬಾರಿಗೆ ಅಧ್ಯಕ್ಷನಾದ ಮೇಲೆ ರಾಜ್ಯ ಪ್ರವಾಸ ಕೈಗೊಂಡಿದ್ದು, ವಿಧಾಸಭೆ ಚುನಾವಣಾಯಲ್ಲಿ ಸೋತು ಅತಾಶೆಯಲ್ಲಿದ್ದು ಕಾರ್ಯಕರ್ತರು ಇದೀಗ ಮತ್ತೊಮ್ಮೆ ಲೋಕಸಭಾ ಚುನಾವಣೆಗೆ ಸಜ್ಜಾಗಿ ನಿಂತಿದ್ದಾರೆ, ಸೋಲಿನ ಹತಾಶೆಯಿಂದ ಹೊರ ಬಂದು ಕಾರ್ಯ ಕಾರ್ಯಕಾರಣಿ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಉಮ್ಮಸ್ಸು ಹುಟ್ಟಿಸಿದ್ದಾರೆ ಎಂದರು.
ರಾಜ್ಯ ಮತ್ತು ದೇಶದಲ್ಲಿ ಮೋದಿ ಅಲೆ ಇದ್ದು, ದೇಶದ ಅಭಿವೃದ್ಧಿಗೆ ಮುಂದಾಗಿರುವ ಪ್ರದಾನಿ ನರೇಂದ್ರ ಮೋದಿ ಅವರನ್ನು ಮತ್ತೊಂದು ಗೆಲ್ಲಿಸಲು ಕಾರ್ಯಕರ್ತರು ಶ್ರಮಿಸಬೇಕಿದೆ, ರಾಜ್ಯದಲ್ಲಿನ ಪ್ರಜ್ಞಾವಂತ ಮತದಾರರು ಕಾಂಗ್ರೆಸ್‌ನ ಗ್ಯಾರಂಟಿ ನೋಡಿ ಗೆಲ್ಲಿಸಿದ್ದು ಇದೀಗ ಅದೇ ಗ್ಯಾರಂಟಿ ಯೋಜನೆಗಳು 100ಕ್ಕೆ 10 ಜನಕ್ಕೂ ತಲುಪಿತ್ತಿಲ್ಲ, 8 ತಿಂಗಳು ಅಧಿಕಾರಕ್ಕೆ ಬಂದಿ ಇಂದಿಗೂ ಸಹ ರಾಜ್ಯದ ಅಭಿವೃದ್ಧಿಗೆ ಅನುದಾನ ನೀಡಿಲ್ಲ, ಕೇವಲ, ಇತರೆ ಯೋಜನೆಗಳಿಗೆ ಮೀಸಲಿಟ್ಟ ಅನುದಾನ ಗ್ಯಾರಂಟಿಗೆ ಅನುದಾನ ಬಳಕೆ ಮಾಡುತ್ತಿದೆ ಎಂದು ದೂರಿದರು.
ರಾಜ್ಯದಲ್ಲಿ ಮತ್ತು ದೇಶದಲ್ಲಿ ಕಾಂಗ್ರೆಸ್ ಅಲೆ ಇದೆ ಎಂದು ಹೇಳುವ ಕಾಂಗ್ರೆಸ್ ನಾಯಕರಿಗೆ ಪಂಚ ರಾಜ್ಯ ಚುನಾವಣೆಯಲ್ಲಿ ಬಿಜೆಪಿ ಎನೆಂಬುದು ತೋರಿಸಿ ಕೊಟ್ಟಿದ್ದೇವೆ, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದ ಭ್ರಮೆಯಲ್ಲಿರುವ ಕಾಂಗ್ರೆಸ್ ನಾಯಕರು ಬಿಜೆಪಿ ಶಕ್ತಿ ಎನೆಂಬುದು ತೋರಿಸಲು ಕಾರ್ಯಕರ್ತರು ಸಜ್ಜಾಗಿ ನಿಂತಿದ್ದಾರೆ, ಕಾಂಗ್ರೆಸ್‌ನ ಗ್ಯಾರಂಟಿಗೆ ಮಾರು ಹೋಗಿದ್ದ ಕಾರ್ಯಕರ್ತರು ಇದೀಗ ಮೋದಿ ಅಭಿವೃದ್ಧಿಯ ಗ್ಯಾರಂಟಿ ಶ್ರೇಷ್ಠವಾಗಿದೆ ಎಂದು ಅರಿತುಕೊಂಡಿದ್ದಾರೆ ಎಂದು ತಿಳಿಸಿದರು.
ರಾಜ್ಯದಲ್ಲಿ ಬರಗಾಲವಿದ್ದು, ಬಡವರ, ರೈತರಿಗೆ ನೆರವಾಗದೇ ಕೇಂದ್ರ ಸರ್ಕಾರದ ಪರಿಹಾರ ಕೊಟ್ಟಿಲ್ಲ ಎಂದು ಹೇಳುತ್ತಿದ್ದಾರೆ, ಈ ಹಿಂದೆ ಬಿಜೆಪಿ ಅಧಿಕಾರದಲ್ಲಿ ಯಡಿಯೂರಪ್ಪ ನವರು ಕೇಂದ್ರದ ಪರಿಹಾರದ ಹಣ ಎದುರು ನೋಡದೇ ಬಡವರು, ರೈತರಿಗೆ ನೆರವಿಗೆ ಧಾವಿಸಿದ್ದರು, ಆದರೆ ಈಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಕರುಣೆ ಇಲ್ಲದ ಮುಖ್ಯಮಂತ್ರಿಯಾಗಿದ್ದಾರೆ ಎಂದರು.
ದೇಶದ ಅಭಿವೃದ್ಧಿಗೆ ಪಣ ತೊಟ್ಟಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಲು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ 28 ಕ್ಷೇತ್ರಗಳು ಗೆಲ್ಲಿಸುವ ಮೂಲಕ ಶಕ್ತಿ ಪ್ರದರ್ಶನ ತೋರಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಾಸಕ ಹಾಗೂ ಜಿಲ್ಲಾದ್ಯಕ್ಷ ಶಿವರಾಜ ಪಾಟೀಲ್, ಸಂಸದ ರಾಜಾ ಅಮರೇಶ್ವರ ನಾಯಕ, ಕರಡಿ ಸಂಗಣ್ಣ, ಮಾಜಿ ಸಂಸದ ಬಿ.ವಿ.ನಾಯಕ, ರಾಜುಗೌಡ, ಪ್ರತಾಪ್ ಗೌಡ ಪಾಟೀಲ್, ಬಸನಗೌಡ ಬ್ಯಾಗವಾಟ್, ಎ.ಪಾಪಾರೆಡ್ಡಿ, ಪಿ.ರಾಜೀವ್, ಗಂಗಾಧರ ನಾಯಕ, ರವಿಂದ್ರ ಜಲ್ದಾರ್, ಸೇರಿದಂತೆ ಅನೇಕರು ಭಾಗವಹಿಸಿದ್ದರು.