Live Stream

May 2025
S M T W T F S
 123
45678910
11121314151617
18192021222324
25262728293031

| Latest Version 9.4.1 |

State News

ಹಿಜಾಬ್ ನಿಷೇಧ ಕುರಿತು ಸಾಧಕ-ಬಾಧಕ ನೋಡಿಕೊಂಡು ತೀರ್ಮಾನ

ಹಿಜಾಬ್ ನಿಷೇಧ ಕುರಿತು ಸಾಧಕ-ಬಾಧಕ ನೋಡಿಕೊಂಡು ತೀರ್ಮಾನ

ಮಂಗಳೂರು: ಬಿಜೆಪಿ ಸರ್ಕಾರದಲ್ಲಿ ಹಿಜಾಬ್‌ ಧರಿಸುವುದನ್ನು ನಿಷೇಧಿಸಿ ಆದೇಶವನ್ನೇ ಮಾಡಿರಲಿಲ್ಲ ಎಂದು ಬೊಮ್ಮಾಯಿ ಸ್ಪಷ್ಟಪಡಿಸಿದ್ದು, ಒಂದು ವೇಳೆ ಹಿಜಾಬ್‌ ನಿಷೇಧಿಸಿದ್ದರೂ ಅದನ್ನು ಮರುಪರಿಶೀಲನೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.ಈ ವಿಚಾರದಲ್ಲಿ ಸಾಧಕ-ಬಾಧಕ ನೋಡಿಕೊಂಡು ಸರ್ಕಾರ ತೀರ್ಮಾನ ತೆಗೆದುಕೊಳ್ಳಲಿದೆ’ ಎಂದು ಗೃಹಸಚಿವ ಜಿ.ಪರಮೇಶ್ವರ ಹೇಳಿದರು.

ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಅವರು, ‘ಈ ವಿಚಾರದಲ್ಲಿ ಅನಗತ್ಯ ಗೊಂದಲ ಸೃಷ್ಟಿಸುವ ಅವಶ್ಯಕತೆಯಿಲ್ಲ’ ಎಂದರು.‌
ಮುಸ್ಲಿಂ ಸಮುದಾಯದವರು ಹಿಂದಿನಿಂದಲೂ ಶಾಲಾ ಕಾಲೇಜುಗಳಿಗೆ ಹಿಜಾಬ್ ಧರಿಸಿಕೊಂಡು ಬರುತ್ತಿದ್ದರು. ಬಿಜೆಪಿ ನೇತೃತ್ವದ ಸರ್ಕಾರ ಬಂದಾಗ ಹಿಜಾಬ್‌ ಧರಿಸುವ ಬಗ್ಗೆ ಬೇರೆ ಬೇರೆ ವ್ಯಾಖ್ಯಾನಗಳಾಗಿವೆ. ಸಂವಿಧಾನದ ಚೌಕಟ್ಟಿ ನಲ್ಲಿಯೇ ತೀರ್ಮಾನ ತೆಗೆದುಕೊಳ್ಳುತ್ತೇವೆ. ಸಂವಿಧಾನದ ಆಶಯಗಳಿಗೆ ಹೊರತಾಗಿ ನಾವು ಯಾವುದೇ ಕೆಲಸ ಮಾಡುವುದಿಲ್ಲ. ಸಂವಿಧಾನದ ಚೌಕಟ್ಟಿನಲ್ಲಿ ತೀರ್ಮಾನ ತೆಗೆದುಕೊಂಡಾಗ ಕೆಲವರಿಗೆ ನೋವಾಗಬಹುದು ಕೆಲವರಿಗೆ ಸಂತೋಷವಾಗಬಹುದು’ ಎಂದರು.

Megha News