ಬೆಂಗಳೂರು. ರಾಜ್ಯ ಸರ್ಕಾರದಲ್ಲಿ ದರೋಡೆ ಕೋರರಿಗೆ ರಕ್ಷಣೆಯಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಯಾರನ್ನು ಹೇಗೆ ರಕ್ಷಣೆ ಮಾಡುತ್ತಿದೆ ಎಂಬುದು ನಿನ್ನೆ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ತೀರ್ಮಾನದಿಂದ ಗೊತ್ತಾಗುತ್ತದೆ ಎಂದು ಟೀಕಿಸಿದ್ದಾರೆ.
ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರವು ಆದಾಯ ಮೀರಿ ಆಸ್ತಿ ಗಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧದ ಪ್ರಕರಣವನ್ನು ಸಿಬಿಐ ತನಿಖೆ ನಡೆಸಲು ಅನುಮತಿ ನೀಡಿದ್ದನ್ನು ವಾಪಸ್ಸು ಪಡೆಯಲು ಸಚಿವ ಸಂಪುಟ ನಿರ್ಣಯ ಕೈಗೊಂಡಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಇದು ಸ್ವಜನ ಪಕ್ಷಪಾತವಲ್ಲ.
ಮಾನ ಮರ್ಯಾದೆ ಇದ್ದವರು ಹೆದರುತ್ತಾರೆ. ಕೋರ್ಟಿನಲ್ಲಿದ್ದರೇನು? ಬೇರೆ ಯಾವುದೇ ಬೇಕಾದರೂ ಇರಲಿ ಕೊಂಡುಕೊಳ್ಳುತ್ತೇನೆ ಎಂಬ ದುರಹಂಕಾರದಲ್ಲಿರುವವರಿಗೆ ಏನು ಮಾಡುವುದು ಎಂಬ ಅಸಮಾಧಾನ ಹೊರಹಾಕಿದರು. ಈ ವಿಚಾರ ನ್ಯಾಯಾಲಯದಲ್ಲಿ ಇರುವುದರಿಂದ ಹೆಚ್ಚಿಗೆ ಮಾತನಾಡುವುದಿಲ್ಲ ಎಂದು ಅವರು ಹೇಳಿದರು.