ರಾಯಚೂರು: ಮಾನ್ವಿ ತಾಲೂಕಿನ ಮುದ್ದಂಗುಡ್ಡಿ ಗ್ರಾಮದ ಅಪ್ರಾಪ್ತ ಬಾಲಕಿನ ಮೇಲಿನ ಅತ್ಯಾಚಾರ ಪ್ರಕರಣ ಮಾಸುವ ಮುನ್ನವೇ ಇದೀಗ ಜಿಲ್ಲೆಯಲ್ಲಿ ಮತ್ತೊಂದು ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದ್ದು, ಆರೋಪಿಯನ್ನು ಬಂಧಿಸಲಾಗಿದೆ.
ಹಟ್ಟಿ ಪಟ್ಟಣದ ಬಸವೇಶ್ವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 6ನೇ ತರಗತಿಯಲ್ಲಿ ಓದುತ್ತಿದ್ದ 11 ವರ್ಷದ ಬಾಲಕಿಗೆ ಚಾಕಲೇಟ್ ಕೊಡಿಸಿ ಪುಸಲಾಯಿಸಿ ತನ್ನ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ ಆರೋಪದ ಮೇಲೆ ಚಂದ್ರಶೇಖರ ತಂದೆ ಯಲ್ಲಪ್ಪ (43) ಎಂಬ ಆರೋಪಿಯನ್ನು ಹಟ್ಟಿ ಪೊಲೀಸರು ಬಂಧಿಸಿದ್ದಾರೆ.
ಸೋಮವಾರ ಮಧ್ಯಾಹ್ನದ ವೇಳೆ ಶಾಲೆಯ ಪಕ್ಕದಲ್ಲಿನ ಅಂಗಡಿ ಬಳಿ ನಿಂತಿದ್ದ ಬಾಲಕಿಗೆ ಕಾಮುಕ ಚಾಕೊಲೇಟ್ ಕೊಡಿಸಿ ಪುಸಲಾಯಿಸಿ ರಾಮ್ ರಹೀಮ್ ಕಾಲೋನಿಯಲ್ಲಿನ ತನ್ನ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ. ಬಾಲಕಿಯನ್ನು ಕರೆದುಕೊಂಡು ಹೋಗುವುದನ್ನು ಕಂಡ ಅಕ್ಕ ಪಕ್ಕದ ಜನರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಆಧಾರದ ಮೇಲೆ ಪೊಲೀಸರು ಆರೋಪಿಯ ಮನೆಗೆ ತೆರಳಿ ಬಾಗಿಲು ತೆಗೆದು ನೋಡಿದಾಗ ಅತ್ಯಾಚಾರ ಎಸಗಿರುವುದು ಬೆಳಕಿಗೆ ಬಂದಿದೆ. ಕೂಡಲೇ ಪೊಲೀಸರು ಬಾಲಕಿ ಸಂಜನಾಳನ್ನು ಕಾಮುಕನಿಂದ ರಕ್ಷಣೆ ಮಾಡಿದ್ದಾರೆ.
ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪಿ ಚಂದ್ರಶೇಖರ ವಿರುದ್ಧ ಶಾಲೆಯ ಶಿಕ್ಷಕರು ಹಾಗೂ ಶಾಲಾ ಶಿಕ್ಷಕರು ನೀಡಿದ ದೂರಿನ ಮೇಲೆ ಹಟ್ಟಿ ಠಾಣೆಯಲ್ಲಿ ಪಿಎಸ್ಐ ರತ್ನಮ್ಮ ಅವರು ಪ್ರಕರಣ ದಾಖಲಿಸಿಕೊಂಡಿದ್ದಾರೆ.