ರಾಯಚೂರು. ನಗರದ ವಿವಿಧ ಬಡಾವಣೆ ಹಾಗೂ ಮುಖ್ಯ ರಸ್ತೆಗಳಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು,ಜನಸಾಮಾನ್ಯರು ಒಬ್ಬಂಟಿಯಾಗಿ ಓಡಾಡುವುದು ಕಷ್ಟಕರವಾಗಿದೆ.
ನಗರದಲ್ಲಿ ಬಡಾವಣೆ ಗಲ್ಲಿಗಳಲ್ಲಿ ತಿರುಗಾಡುತ್ತಿರುವ ಬೀದಿ ನಾಯಿಗಳ ಹಿಂಡು ವಾಹನ ಸವಾರರು, ಜನ ಸಾಮಾನ್ಯರ ಮೇಲೆ, ದಾಳಿ ಮಾಡುತ್ತಿವೆ. ಕೆಲ ನಾಯಿಗಳು ಬೈಕ್, ಕಾರುಗಳ ಹಿಂದೆ ಓಡಿ ಬರುತ್ತಿರುವ ಪರಿಣಾಮ ವಾಹನ ಸವಾರರು ಆತಂಕ ಪಡಬೇಕಾಗಿದೆ. ರಸ್ತೆಯಲ್ಲಿ ಚಿಕ್ಕ ಮಕ್ಕಳು, ವಯೋವೃದ್ಧರು ತಿರುಗಾಡಲು ಹಿಂದೇಟು ಹಾಕುವಂತಾಗಿದೆ. ರಾತ್ರಿ ವೇಳೆ ವಾರ್ಡ್‌ಗಳಲ್ಲಿ, ಕಾಲೊನಿ ನಿವಾಸಿಗಳ ನಿದ್ದೆಗೆಡಿಸುತ್ತಿರುವ ಬಿಡಾಡಿ ನಾಯಿಗಳು ಉಪಟಳ ಹೆಚ್ಚಾಗಿದೆ.
ಹಿಡಿಶಾಪ: ಬೀದಿ ನಾಯಿಗಳ ಹಾವಳಿ ತಪ್ಪಿಸುವಂತೆ ನಗರಸಭೆಗೆ ಸ್ಥಳೀಯರು ಮನವಿ ಸಲ್ಲಿಸಿದ್ದಾರೆ. ಆದರೆ, ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದ ಪರಿಣಾಮ ಸಾರ್ವಜನರು ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದಾರೆ. ಪಟ್ಟಣದ ಅಂಬೇಡ್ಕರ್ ವೃತ್ತ, ಬಸ್ ನಿಲ್ದಾಣ ರಸ್ತೆ, ಗಾಂಧಿ ವೃತ್ತ, ಸಿಯಾತಲಾಬ್, ಉರುಕುಂದಿ ಈರಣ್ಣ ದೇವಸ್ಥಾನ, ಸೇರಿದಂತೆ ಮುಖ್ಯ ರಸ್ತೆಯಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ.
ಕೆಲ ರಸ್ತೆಗಳಲ್ಲಿ ಮಾಂಸದಂಗಡಿಗಳು ಇವೆ. ಈ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬೀದಿ ನಾಯಿಗಳು ಕಾಣಿಸುತ್ತವೆ. ಅಂಗಡಿದಾರರು ಸಾರ್ವಜನಿಕ ಸ್ಥಳ, ಕಸದ ತೊಟ್ಟಿಯಲ್ಲಿ ಮಾಂಸದ ತ್ಯಾಜ್ಯ ಹಾಕುವುದರಿಂದ ನಾಯಿಗಳು ಚೆಲ್ಲಾಟ ಹೆಚ್ಚಾಗಿದೆ.
ನಗರಸಭೆ ಅಧಿಕಾರಿಗಳ ಬೀದಿ ನಾಯಿಗಳ ನಿಯಂತ್ರಣಕ್ಕೆ ಮಾಡಬೇಕಿದೆ, ನಾಯಿಗಳ ಸಂತಾನ ತಡೆ ಚಿಕಿತ್ಸೆ ಮಾಡುವುದರಿಂದ ಬೀದಿ ನಾಯಿಗಳ ಹಾವಳಿ ನಿಯಂತ್ರಣ ಮಾಡಬ ಹುದು. ಆದರೆ, ಈ ಕಾರ್ಯಕ್ಕೆ ನಗರಸಭೆ ಮುಂದಾಗುತ್ತಿಲ್ಲ. ಆದ್ದರಿಂದ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ.