Live Stream

April 2025
S M T W T F S
 12345
6789101112
13141516171819
20212223242526
27282930  

| Latest Version 9.4.1 |

Local News

ತಾಲ್ಲೂಕಿನಲ್ಲಿ ಪಕ್ಷಕ್ಕೆ ಶಕ್ತಿ ತುಂಬುವ ಕೆಲಸ ಮಾಡಬೇಕಿದೆ: ರವಿಪಾಟೀಲ್

ತಾಲ್ಲೂಕಿನಲ್ಲಿ ಪಕ್ಷಕ್ಕೆ ಶಕ್ತಿ ತುಂಬುವ ಕೆಲಸ ಮಾಡಬೇಕಿದೆ: ರವಿಪಾಟೀಲ್

ಜಾಲಹಳ್ಳಿ: ತಾಲ್ಲೂಕಿನಲ್ಲಿ ಕಾಂಗ್ರೆಸ್ ಪಕ್ಷವನ್ನು ಇನ್ನಷ್ಟು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಇವತ್ತು ನಿಮ್ಮಗಳ ಜೊತೆ ಚರ್ಚಿಸಲು ಬಂದಿದ್ದೇನೆ ಈಗಾಗಲೇ ಕಾಂಗ್ರೆಸ್ ನ ಭದ್ರಕೋಟೆಯಾಗಿದ್ದ ಈ ಕ್ಷೇತ್ರವನ್ನು ಕಾಂಗ್ರೆಸ್ ಹೊಡೆದು ಹೋಗಿದೆ ಎನ್ನುವುದು ಸುಳ್ಳು. ಅನಿವಾರ್ಯ ಕಾರಣಗಳಿಂದ ಕಾರ್ಯಕರ್ತರು ಅಲ್ಲಲ್ಲಿ ಚದುರಿ ಹೋಗಿದ್ದಾರೆ ಅವರೆಲ್ಲರನ್ನೂ ಒಟ್ಟುಗೂಡಿಸುವ ಕೆಲಸ ಮಾಡಬೇಕು ಎಂದು ರಾಜ್ಯ ಕಾಂಗ್ರೆಸ್ ಪಕ್ಷದ ಮುಖಂಡರಾದ ರವಿಪಾಟೀಲ್ ಹೇಳಿದರು.

ಜಾಲಹಳ್ಳಿ ಪಟ್ಟಣದ ನಿಜಶರಣ ಅಂಬಿಗರ ಚೌಡಯ್ಯ ಕಲ್ಯಾಣ ಮಂಟಪದಲ್ಲಿ ಸೇರಿದ್ದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು.
ಗ್ಯಾರೆಂಟಿ ಯೋಜನೆಗಳ ಬಗ್ಗೆ ಬಿಜೆಪಿಯವರು ಜನರಲ್ಲಿ ಸುಳ್ಳುಗಳನ್ನು ಬಿತ್ತುತ್ತಿದ್ದಾರೆ. ಕೇಂದ್ರದ ಬಿಜೆಪಿ ಸರ್ಕಾರ ಸುಳ್ಳು ಹೇಳಿ ಜನರ ದಾರಿ ತಪ್ಪಿಸುತ್ತಿದೆ. ನಿರುದ್ಯೋಗವು ಸೇರಿದಂತೆ ದೇಶದಲ್ಲಿ ಹಲವು ಸಮಸ್ಯೆಗಳು ಇದ್ದರೂ ಅದರ ಬಗ್ಗೆ ಮಾತನಾಡದೆ ‌ನಿಜವಾದ ಸಮಸ್ಯೆಗಳನ್ನು ಮರೆಮಾಚಿ ದೇಶದಲ್ಲಿ ಧರ್ಮ ಧರ್ಮದ ಮಧ್ಯೆ ಜಗಳ ಹಚ್ಚಿ ಹೊಡೆದಾಳುವ ನೀತಿಯನ್ನು ಅನುಸರಿಸುತ್ತಿದೆ ಇದನ್ನು ನಮ್ಮ ಯುವಜನರು ಅರ್ಥ ಮಾಡಿಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ ಅಧ್ಯಕ್ಷರಾದ ರಾಮಣ್ಣ ಇರಬಗೇರಾ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅಬ್ದುಲ್ ಅಜೀಜ್, ಅರಕೇರಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಆದನಗೌಡ ಬುಂಕಲದೊಡ್ಡಿ, ಬಸವರಾಜ ಬಿ, ಲಕ್ಕಪ್ಪ ಗಬ್ಬೂರು, ಅಮರೇಗೌಡ, ವಕೀಲರಾದ ರವಿ ಪಾಟೀಲ ಚಿಂಚೋಳಿ, ಪುರಸಭೆ ಸದಸ್ಯರು ಸೇರಿದಂತೆ ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.

Megha News