ರಾಯಚೂರು. ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್‌ಗಳಿಗೆ ಅಧ್ಯಕ್ಷ -ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ನಿಗದಿಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಜಿಲ್ಲೆಯ ಪುರಸಭೆ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ನಿಗದಿಗೊಳಿಸಲಾಗಿದ್ದು,ದೇವದುರ್ಗ ಪುರಸಭೆಯ ಅಧ್ಯಕ್ಷ ಸ್ಥಾನ ಬಿಸಿಬಿ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಮಾನ್ವಿ ಪುರಸಭೆಯ ಅಧ್ಯಕ್ಷ ಸ್ಥಾನ ಬಿಸಿಎ ಮಹಿಳೆ, ಉಪಾಧ್ಯಕ್ಷ ಸ್ಥಾನ ಎಸ್‌ಸಿ ಮಹಿಳೆ, ಮಸ್ಕಿ ಪುರಸಭೆ ಅಧ್ಯಕ್ಷ ಸ್ಥಾನ ಬಿಸಿಎ, ಉಪಾಧ್ಯಕ್ಷ ಸ್ಥಾನ ಎಸ್‌ಸಿ ಮಹಿಳೆ, ಮುದಗಲ್ ಪುರಸಭೆಯ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸಾಮಾನ್ಯ ವರ್ಗಕ್ಕೆ ಮೀಸಲಾಗಿದೆ.
ಲಿಂಗಸೂಗುರು ಪುರಸಭೆ ಅಧ್ಯಕ್ಷ ಸ್ಥಾನ ಸಾಮಾನ್ಯ ಉಪಾಧ್ಯಕ್ಷ ಸ್ಥಾನ ಬಿಸಿಎ,
ಬಳಗಾನೂರು ಪಟ್ಟಣ ಪಂಚಾಯ್ತಿ ಅಧ್ಯಕ್ಷ ಸ್ಥಾನ ಎಸ್‌ಟಿ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ, ಹಟ್ಟಿ ಪಟ್ಟಣ ಪಂಚಾಯ್ತಿ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಎಸ್‌ಟಿ ಮಹಿಳೆ, ಕವಿತಾಳ ಪಟ್ಟಣ ಪಂಚಾಯ್ತಿ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಉಪಾಧ್ಯಕ್ಷ ಎಸ್‌ಸಿ ಮಹಿಳೆ, ಸಿರವಾರ ಪಟ್ಟಣ ಪಂಚಾಯ್ತಿ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಎಸ್‌ಟಿ ಮಹಿಳೆ, ತುರ್ವಿಹಾಳ ಪಟ್ಟಣ ಪಂಚಾ ಯ್ತಿ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಬಿಸಿಎ ಮಹಿಳೆಗೆ ನಿಗದಿಗೊಳಿಸಿ ನಗರಾಭಿವೃದ್ಧಿ ಇಲಾಖೆ ಸರಕಾರದ ಆಧೀನ ಕಾರ್ಯದರ್ಶಿ ಟಿ.ಮಂಜುನಾಥ ಅವರು ಅಧಿಸೂಚನೆ ಹೊರಡಿಸಿದ್ದಾರೆ.