ರಾಯಚೂರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಹಾಗೂ ರಾಯಚೂರು ಜಿಲ್ಲಾಡಳಿತದ ವತಿಯಿಂದ ಗೋಕಾಕ್ ಚಳವಳಿಯ ಹಿನ್ನೋಟ- ಮುನ್ನೋಟ ಕಾರ್ಯಕ್ರಮದ ಹಿನ್ನೆಲೆಯಲ್ಲಿ ನಗರದ ಬಸವೇ ಶ್ವರ ವೃತ್ತದಲ್ಲಿ ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್,ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು,ಡೋಲು ಬಾರಿಸುವ ಮೂಲಕ ವಿವಿಧ ಕಲಾ ತಂಡಗಳ ಮೆರೆವಣಿಗೆಗೆ ಚಾಲನೆ ನೀಡಿದರು.
ಮೆರವಣಿಗೆಯಲ್ಲಿ ಜಾನಪದ ಕಲಾತಂಡಗಳು, ವೀರಗಾಸೆ, ಡೊಳ್ಳು ಕುಣಿತ, ಲಮಾಣಿ ಕುಣಿತ, ಮಹಿಳೆಯರಿಂದ ಕೋಲಾಟ, ಕೀಲು ಕುದುರೆ, ಶಿಲ್ಪಕಲೆ, ಚಿತ್ರ ಕಲೆಗಳು ಸೇರಿದಂತೆ ಕಾಲೇಜು ವಿದ್ಯಾರ್ಥಿಗಳು ಕನ್ನಡದ ಬಾವುಟವನ್ನು ಇಡಿದು ಸಾಗಿದರು.
ಮೆರವಣಿಗೆ ಬಸವೇಶ್ವರ ವೃತ್ತದಿಂದ ಆರಂಭವಾಗಿ ವಾಲ್ಮೀಕಿ ವೃತ್ತದ ಮೂಲಕ ಕೃಷಿ ವಿವಿ ಆವರಣಲ್ಲಿನ ಶಾಂತರಸ ವೇದಿಕೆಗೆ ತಲುಪಿತು.
ಮೆರವಣಿಗೆಯಲ್ಲಿ ಕರ್ನಾಟಕ ರಾಜ್ಯ ಕೈಗಾರಿಕಾ ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಸಿಂಧನೂರು ಕ್ಷೇತ್ರದ ಶಾಸಕ ಹಂಪನಗೌಡ ಬಾದರ್ಲಿ, ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್, ವಿಧಾನ ಪರಿಷತ್ ಸದಸ್ಯರಾದ ಎ.ವಸಂತಕುಮಾರ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಪುರುಷೋತ್ತಮ ಬಿಳಿಮಲೆ, ಜಿಲ್ಲಾಧಿಕಾರಿ ನಿತೀಶ್ ಕೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ತುಕಾರಾಮ್ ಪಾಂಡ್ವೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಎಂ.ಪುಟ್ಟಮಾದಯ್ಯ,ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯಾದ ಸಂತೋಷ ಹಾನಗಲ್, ಅಪರ ಜಿಲ್ಲಾಧಿಕಾರಿ ಶಿವಾನಂದ, ರಾಯಚೂರು ಸಹಾಯಕ ಆಯುಕ್ತರಾದ ಗಜಾನನ ಬಾಳೆ, ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.