ರಾಯಚೂರು. ಬೈಕ್ ಚಲಾಯಿಸುತ್ತಿದ್ದ ಸವಾರ ನಿಯಂತ್ರಣ ತಪ್ಪಿ ತಲೆಗೆ ತೀವ್ರ ಪೆಟ್ಟಾಗಿ ಮೃತಪಟ್ಟರುವ ಘಟನೆ ಮಾನವಿ ತಾಲೂಕಿನ ಹೊರವಲಯದಲ್ಲಿ ನಡೆದಿದೆ.
ಬೈಕ್ ಸವಾರ ರಾಯಚೂರು ತಾಲೂಕಿನ ಹುಣಸಿಹಾಳಹುಡಾ ಗ್ರಾಮದ ನಿವಾಸಿ ಸಿದ್ಧಲಿಂಗ (26) ಎಂದು ಗುರುತಿಸಲಾಗಿದೆ.
ಬೈಕ್ ಚಾಲನೆ ಮಾಡುತ್ತಿರುವ ವೇಳೆ ನಿಯಂತ್ರಣ ತಪ್ಪದ ವೇಳೆ ರಸ್ತೆಯಲ್ಲಿ ಬಿದ್ದು, ತಲೆಗೆ ತೀವ್ರ ಪೆಟ್ಟಾಗಿದ್ದು ರಿಮ್ಸ್ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆದಲ್ಲಿ ಮೃತಪಟ್ಟಿದ್ದಾನೆ.
ಹಿಂಬದಿಯ ಸವಾರನಿಗೆ ಗಂಭೀರ ಗಾಯಗಳಾ ಗಿವೆ, ರಿಮ್ಸ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಕುರಿತು ಮಾನವಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.