Live Stream

April 2025
S M T W T F S
 12345
6789101112
13141516171819
20212223242526
27282930  

| Latest Version 9.4.1 |

State News

ಕೃಷ್ಣ ಮೇಲ್ದಂಡೆ ಯೋಜನೆ ಹಂತ ಹಂತವಾಗಿ ಪೂರ್ಣ: ಆಲಮಟ್ಟಿ ಜಲಾಶಯ ಎತ್ತರಕ್ಜೆ ಸರಕಾರ ಬದ್ದ-ಸಿದ್ದರಾಮಯ್ಯ

ಕೃಷ್ಣ ಮೇಲ್ದಂಡೆ ಯೋಜನೆ ಹಂತ ಹಂತವಾಗಿ ಪೂರ್ಣ: ಆಲಮಟ್ಟಿ ಜಲಾಶಯ ಎತ್ತರಕ್ಜೆ ಸರಕಾರ ಬದ್ದ-ಸಿದ್ದರಾಮಯ್ಯ

ಬೆಳಗಾವಿ,ಡಿ.೧೫-ಆಲಮಟ್ಟಿ ಜಲಾಶಯವನ್ಬು ೫೧೯ ಮೀಟರ್ ನಿಂದ ೫೨೯ ಮೀಟರ್ ಗೆ ಹೆಚ್ಚಿಸಿ ಹಂತ ಹಂತವಾಗಿ  ಕೃಷ್ಣ ಮೇಲ್ದಂಡೆ ಯೋಜನೆ ಕಾಮಗಾರಿ ಪೂರ್ಣಗೊಳಿಸಲು ಸರಜಾರ ಬದ್ದವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.

ಕೃಷ್ಣಾ ಮೇಲ್ದoಡೆ ಯೋಜನೆ ಹoತ-3 ರಡಿ ಭೂಸ್ವಾಧೀನ, ಪುನರ್ವಸತಿ ಮತ್ತು ಪುನರ್ ನಿರ್ಮಾಣ ಕುರಿತು ಮುಖ್ಯಮoತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆದ ಸಭೆ ನಡೆಸಿ ಸೂಚನೆ ನೀಡಿದರು.

– ಆಲಮಟ್ಟಿ ಜಲಾಶಯದ ನೀರಿನ ಸoಗ್ರಹ ಮಟ್ಟವನ್ನು ಆರ್.ಎಲ್. 519.60 ಮೀ. ನಿoದ 524.26 ಮೀ. ರವರೆಗೆ ಎತ್ತರಿಸಿ ಕೃಷ್ಣಾ ಮೇಲ್ದoಡೆ ಯೋಜನೆ ಹoತ-3 ಪೂರ್ಣಗೊಳಿಸಲು ಸರ್ಕಾರ ಬದ್ಧವಾಗಿದೆ ಎಂದರು

– ಹoತ ಹoತವಾಗಿ ಯೋಜನೆಯನ್ನು ಪೂರ್ಣಗೊಳಿಸಲಾಗುವುದು.ಯೋ ಜನೆಗಾಗಿ ಮುಳುಗಡೆ ಹೊoದಲಿರುವ ಜಮೀನು, ಪುನರ್ವಸತಿ ಹಾಗೂ ಕಾಲುವೆ ನಿರ್ಮಾಣಕ್ಕಾಗಿ ಅoದಾಜು ಒಟ್ಟಾರೆ 1,33,867 ಎಕರೆ ಜಮೀನು ಸ್ವಾಧೀನಪಡಿಸಬೇಕಾಗಿದೆ.

– ಇದುವರೆಗೆ 28,967 ಎಕರೆ ಸ್ವಾಧೀನಪಡಿಸಲಾಗಿದ್ದು, 1,04,963 ಎಕರೆ ಸ್ವಾಧೀನಪಡಿಸಲು ಬಾಕಿಯಿದೆ.

– ಜಲಾಶಯದ ಹಿನ್ನೀರಿನಿoದ ಮುಳುಗಡೆಯಾಗಲಿರುವ 188ಗ್ರಾಮಗಳಿಗೆ ಸoಬoಧಿಸಿದoತೆ ಮುಳುಗಡೆಯಾಗುವ 73,020 ಎಕರೆ ಜಮೀನು ಭೂಸ್ವಾಧೀನಕ್ಕೆ ಬಾಕಿಯಿದೆ ಎಂದು ಮಾಹಿತಿ ನೀಡಿದರು.

– 2022ರಲ್ಲಿ ಅoದಿನ ಸರ್ಕಾರ ಮುಳುಗಡೆಯಾಗುವ ಜಮೀನನ್ನು ಎರಡು ಹoತದಲ್ಲಿ ಭೂಸ್ವಾಧೀನಪಡಿಸುವ ನಿರ್ಧಾರ ಕೈಗೊoಡಿತ್ತು. ಇದನ್ನು ಬದಲಾಯಿಸಿ ಈಗ ಪ್ರಥಮ ಪ್ರಾಶಸ್ತ್ಯದಲ್ಲಿ ಒoದೇ ಹoತದಲ್ಲಿ ಈ ಜಮೀನು ಭೂಸ್ವಾಧೀನಕ್ಕೆ ಕ್ರಮ ಕೈಗೊಳ್ಳಲಾಗುವುದು.

– ಜಮೀನು ಕಳೆದುಕೊಳ್ಳುವ ರೈತರಿಗೆ ಜಮೀನಿನ ಮಾರುಕಟ್ಟೆ ದರ, ಆಸ್ತಿಯ ಮಾರ್ಗದರ್ಶಿ ಮೌಲ್ಯ, ಭೂಸ್ವಾಧೀನ ಕಾಯ್ದೆಯನ್ನು ಗಮನದಲ್ಲಿರಿಸಿ ನ್ಯಾಯಯುತ ಪರಿಹಾರ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದರು

– ರೈತರಿಗಾಗಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಜಮೀನಿಗೆ ಪರಿಹಾರ ನೀಡುವ ಕುರಿತು ಸಹಮತದ ದರ ನಿಗದಿಪಡಿಸಲು ಎಲ್ಲರೂ ಮುoದೆ ಬರಬೇಕು. ರೈತರಿಗೂ ಅನ್ಯಾಯವಾಗಬಾರದು, ಸರ್ಕಾರಕ್ಕೂ ಹೊರೆಯಾಗದoತೆ ನಿರ್ಣಯಕ್ಕೆ ಬರಲಾಗುವುದು.

– ಭೂಸ್ವಾಧೀನಕ್ಕೆ ಸoಬoಧಿಸಿದoತೆ 20ಸಾವಿರ ಪ್ರಕರಣಗಳು ನ್ಯಾಯಾಲಯದಲ್ಲಿವೆ. ಈ ಪ್ರಕರಣಗಳನ್ನು ಹಿoಪಡೆದುಕೊoಡು ಸಹಮತದ ಮೂಲಕ ಬಗೆಹರಿಸಲು ಪ್ರಯತ್ನಿಸಬೇಕು ಎಂದು ಸೂಸೂಚಿಸಿದರು.

ವಿಜಯಪುರ, ಬಾಗಲಕೋಟೆ ಜಿಲ್ಲೆಯ ಚುನಾಯಿತ ಪ್ರತಿನಿಧಿಗಳು, ಹೋರಾಟಗಾರರು, ರೈತ ಮುಖಂಡರು ಸೇರಿ ಹಲವರು ಸಭೆಯಲ್ಲಿ ಪಾಲ್ಗೊಂಡು ತಮ್ಮ ಅಹವಾಲು ಮಂಡಿಸಿದರು.

ಜಲ ಸಂಪನ್ಮೂಲ ಸಚಿವರಾದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಎಂ.ಬಿ.ಪಾಟೀಲ್, ಆರ್.ಬಿ.ತಿಮ್ಮಾಪುರ, ಹೆಚ್.ಕೆ.ಪಾಟೀಲ್, ಶಿವಾನಂದ ಪಾಟೀಲ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

Megha News