Live Stream

July 2025
S M T W T F S
 12345
6789101112
13141516171819
20212223242526
2728293031  

| Latest Version 9.4.1 |

State News

ಮರು‌ ಜಾತಿ ಗಣತಿಗೆ ನಿರ್ಧಾರ-ಸಿದ್ದರಾಮಯ್ಯ

ಮರು‌ ಜಾತಿ ಗಣತಿಗೆ ನಿರ್ಧಾರ-ಸಿದ್ದರಾಮಯ್ಯ

 

ನವದೆಹಲಿ, ಜೂನ್ 10: ಜಾತಿಗಣತಿ ವರದಿ ಬಗ್ಗೆ ಅಪಸ್ವರ ಎದ್ದಿರುವ ಹಿನ್ನಲೆಯಲ್ಲಿ, ಈಗಾಗಲೇ ಸಲ್ಲಿಕೆಯಾಗಿರುವ ಜಾತಿಗಣತಿ ವರದಿಗೆ ತಾತ್ವಿಕ ಒಪ್ಪಿಗೆ ನೀಡಿ, ಸಮೀಕ್ಷೆಗೆ ಮರುಗಣತಿ ನಡೆಸಲು ನಿರ್ಧಾರ ಕೈಗೊಂಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಮಂಗಳವಾರ ನವದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಕರ್ನಾಟದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಕಾಂಗ್ರೆಸ್ ಪಕ್ಷದ ವರಿಷ್ಠರೊಂದಿಗೆ ಚರ್ಚಿಸಲಾಗಿದೆ. ವಿವಿಧ ಜಾತಿಗಳ ಸಂಘಸಂಸ್ಥೆಗಳು, ಮಠಾಧೀಶರು, ಸಮುದಾಯದಗಳ ಮುಖಂಡರು, ಸಚಿವರು ಜಾತಿಗಣತಿ ವರದಿ ಬಗ್ಗೆ ಅಪಸ್ವರ ಎತ್ತಿರುವ ಬಗ್ಗೆ ಚರ್ಚಿಸಲಾಗಿ, ಜಾತಿಗಣತಿ ವರದಿಯನ್ನು ತಾತ್ವಿಕವಾಗಿ ಒಪ್ಪಿಕೊಳ್ಳುವುದು ಹಾಗೂ ಜಾತಿ ಗಣತಿಯ ದತ್ತಾಂಶ ಹತ್ತು ವರ್ಷ ಹಳೆಯದಾಗಿರುವುದರಿಂದ ಮರುಗಣತಿ ಮಾಡಲು ತೀರ್ಮಾನಿಸಲಾಗಿದೆ. ಈಗಾಗಲೇ ಪರಿಶಿಷ್ಟ ಜಾತಿಗಳ ಜನಗಣತಿ ನಡೆದಂತೆ, ಇತರೆ ಜಾತಿಗಳ ಗಣತಿಯನ್ನು ಹೊಸದಾಗಿ ಕೈಗೊಳ್ಳಲು ನಿರ್ಧರಿಸಲಾಗಿದೆ. ಸಮೀಕ್ಷಾ ಕಾರ್ಯವನ್ನು 90 ದಿನದೊಳಗೆ ಪೂರ್ಣಗೊಳಿಸಿ ವರದಿ ನೀಡಬೇಕಾಗುವುದು ಎಂದು ತಿಳಿಸಿದರು.

*ಕಾಲ್ತುಳಿತ ಪ್ರಕರಣ: ಸರ್ಕಾರದ ಕ್ರಮಗಳ ಬಗ್ಗೆ ವರಿಷ್ಠರಿಗೆ ವಿವರಣೆ*

ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಕಾಲ್ತುಳಿತ ಪ್ರಕರಣದ ಬಗ್ಗೆ ಚರ್ಚಿಸಿ, ಸರ್ಕಾರ ತೆಗೆದುಕೊಂಡ ಕ್ರಮಗಳ ಬಗ್ಗೆ ವರಿಷ್ಠರಿಗೆ ವಿವರಿಸಲಾಗಿದೆ. ಪ್ರಕರಣದ ತನಿಖೆಗೆ ಜಿಲ್ಲಾಧಿಕಾರಿಗಳ ನೇತೃತ್ವದ ಮ್ಯಾಜಿಸ್ಟ್ರಿಯಲ್ ತನಿಖೆ, ನಿವೃತ್ತ ನ್ಯಾಯಮೂರ್ತಿ ನೇತೃತ್ವದ ಏಕಸದಸ್ಯ ಆಯೋಗ ರಚನೆ ಮೈಕೆಲ್ ಕುನಾ , ಐದು ಪೊಲೀಸ್ ಅಧಿಕಾರಿಗಳ ಅಮಾನತ್ತು , ಗುಪ್ತಚರ ಇಲಾಖೆಯ ಮುಖ್ಯಸ್ಥರ ಬದಲಾವಣೆ , ರಾಜಕೀಯ ಕಾರ್ಯದರ್ಶಿಗಳ ಬದಲಾವಣೆಯಂತಹ ಸರ್ಕಾರದ ಕ್ರಮಗಳು ಸಮರ್ಪಕವಾಗಿರುವ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಏಕಸದಸ್ಯ ಆಯೋಗದ ತನಿಖಾ ವರದಿಯನ್ನು ಆಧರಿಸಿ, ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

*ಸಚಿವ ಸಂಪುಟ ಪುನರ್ರಚನೆಯ ಬಗ್ಗೆ ಚರ್ಚೆಯಾಗಿಲ್ಲ*

ಇದೇ ತಿಂಗಳ 13 ರಂದು 16 ನೇ ಹಣಕಾಸಿನ ಆಯೋಗದ ಅಧ್ಯಕ್ಷರನ್ನು ಭೇಟಿಯಾಗಲು ನವದೆಹಲಿಗೆ ಆಗಮಿಸಲಿದ್ದೇನೆ. ಸಚಿವ ಸಂಪುಟ ಪುನರ್ರಚನೆಯ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ ಎಂದರು.

*ಕುಂಭಮೇಳದ ಕಾಲ್ತುಳಿತ ಘಟನೆ- ಅಲ್ಲಿನ ಸಿಎಂ ಜವಾಬ್ದಾರರಲ್ಲವೇ?*

ಕೇಂದ್ರದ ಸಂಸತ್ ನಲ್ಲಿ ಬೆಂಗಳೂರಿನ ಕಾಲ್ತುಳಿತದ ಘಟನೆ ಚರ್ಚೆಗೆ ಬರುವ ಸಾಧ್ಯತೆಯಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕೇಂದ್ರ ಸರ್ಕಾರ ಮೊದಲು ಕುಂಭಮೇಳದಲ್ಲಿ ನಡೆದ ಕಾಲ್ತುಳಿತ , ಪ್ರಧಾನಿಯವರು ಉದ್ಘಾಟಿಸಿದ ಸೇತುವೆ ಕುಸಿದು ಜನ ಮೃತಪಟ್ಟ ಘಟನೆಯ ಬಗ್ಗೆ ಸಂಸತ್ತಿನಲ್ಲಿ ಚರ್ಚೆ ನಡೆಯಲಿ. ಬೆಂಗಳೂರಿನಲ್ಲಿ ನಡೆದ ಘಟನೆ ನಡೆದಿರುವುದುಕ್ಕೆ ಸರ್ಕಾರಕ್ಕೆ ದು:ಖದ ಸಂಗತಿಯಾಗಿದೆ. ಯುವಜನರ ಸಾವು ಎಲ್ಲರಿಗೂ ನೋವು ತರುವ ವಿಚಾರ. ಕುಂಭಮೇಳದ ಘಟನೆಯಲ್ಲಿ ಜನರ ಸಾವು ಪ್ರಕರಣದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರ ಜವಾಬ್ದಾರಿಯಲ್ಲವೇ ಎಂದು ಪ್ರಶ್ನಿಸಿದರು.

 

ಇಡಿ ತನಿಖಾ ಸಂಸ್ಥೆ 100ಕೋಟಿ ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕಾನೂನು ಕ್ರಮ ತೆಗೆದುಕೊಂಡಿರುವುದಕ್ಕೆ ಯಾವುದೇ ಆಕ್ಷೇಪವಿಲ್ಲ ಎಂದರು.

Megha News