ರಾಯಚೂರು. ರಾಜ್ಯದ 31 ಜಿಲ್ಲೆಗಳ ಬರಪೀಡಿತ ತಾಲೂಕುಗಳಲ್ಲಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು ರಾಜ್ಯ ಸರ್ಕಾರ ರಾಜ್ಯ ವಿಪತ್ತು ನಿರ್ವಹಣಾ ನಿಧಿಯಿಂದ (ಎಸ್‌ಡಿಆರ್‌ಎಫ್) ಕಲ್ಯಾಣ ಕರ್ನಾಟಕಕ್ಕೆ57 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ.
ರಾಜ್ಯದಲ್ಲಿ ಈ ಬಾರಿ 235 ತಾಲೂಕುಗಳ ಪೈಕಿ 216 ತಾಲೂಕುಗಳು ಬರ ಪೀಡಿತ ಎಂದು ಈ ಹಿಂದೆ ರಾಜ್ಯ ಸರ್ಕಾರ ಘೋಷಣೆ ಮಾಡಿತ್ತು.
ಕಲ್ಯಾಣ ಕರ್ನಾಟಕ ಭಾಗದ ಬಳ್ಳಾರಿ-7.50 ಕೋಟಿ ರೂ., ಕೊಪ್ಪಳ-10.50 ಕೋಟಿ ರೂ., ರಾಯಚೂರು-9 ಕೋಟಿ ರೂ., ಕಲಬುರಗಿ- 16.50 ಕೋಟಿ ರೂ., ಬೀದರ್-4.50 ಕೋಟಿ ರೂ., ಯಾದಗಿರಿ-9 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ.
ಈ ಅನುದಾನವನ್ನು ಸಂಬಂಧಪಟ್ಟ ಜಿಲ್ಲಾಧಿಕಾ ರಿಗಳು ಪೇಯಿಸ್ ರಸೀದಿ ಮೂಲಕ ಡ್ರಾ ಮಾಡಿ, ತಮ್ಮ ಡಿಡಿಆರ್‍ಎಫ್ ಪಿಡಿ ಖಾತೆಗೆ ಜಮಾ ಮಾಡಿಕೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಆದೇಶದಲ್ಲಿ ತಿಳಿಸಲಾಗಿದೆ.