Live Stream

May 2025
S M T W T F S
 123
45678910
11121314151617
18192021222324
25262728293031

| Latest Version 9.4.1 |

State News

ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆ ಪ್ರಮಾಣದಲ್ಲಿ ರಾಜ್ಯದ ಸಾಧನೆ ತೃಪ್ತಿಕರವಾಗಿಲ್ಲ: ಸಿಎಂ, ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯದ ಪ್ರಕರಣಗಳಿಗೆ ಸಂಪೂರ್ಣ ಕಡಿವಾಣ ಹಾಕಿ: ಸಿಎಂ ಸೂಚನೆ

ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆ ಪ್ರಮಾಣದಲ್ಲಿ ರಾಜ್ಯದ ಸಾಧನೆ ತೃಪ್ತಿಕರವಾಗಿಲ್ಲ: ಸಿಎಂ, ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯದ ಪ್ರಕರಣಗಳಿಗೆ ಸಂಪೂರ್ಣ ಕಡಿವಾಣ ಹಾಕಿ: ಸಿಎಂ ಸೂಚನೆ

ಬೆಂಗಳೂರು.ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆ ಪ್ರಮಾಣದಲ್ಲಿ ರಾಜ್ಯದ ಸಾಧನೆ ತೃಪ್ತಿಕರವಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.‌

ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿ ಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಮಾತನಾಡಿದರು.
ಶೋಷಣೆಗೆ ಒಳಗಾದವರಿಗೆ ವ್ಯವಸ್ಥೆ ಮೇಲೆ ನಂಬಿಕೆ ಬರಬೇಕಾದರೆ ದೌರ್ಜನ್ಯ ಪ್ರಕರಣಗಳ ತನಿಖೆಯ ಗುಣಮಟ್ಡ ಹೆಚ್ಚಾಗಬೇಕು. ವೈಜ್ಞಾ ನಿಕವಾಗಿ ಸಮರ್ಥ ಆರೋಪ ಪಟ್ಟಿ ಸಲ್ಲಿಕೆ ಯಾಗಬೇಕು ಎಂದು ಸ್ಪಷ್ಟ ಸೂಚನೆ ನೀಡಿದರು.
ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯದ ಪ್ರಕರಣಗಳಿಗೆ ಸಂಪೂರ್ಣ ಕಡಿವಾಣ ಹಾಕಿ. ಶಿಕ್ಷೆ ಪ್ರಮಾಣ ಹೆಚ್ಚಾಗಬೇಕು. ಇಲ್ಲದಿದ್ದರೆ ಡಿಸಿಪಿ ಗಳನ್ನೇ ಈ ವೈಫಲ್ಯಕ್ಕೆ ಹೊಣೆ ಮಾಡುವುದು ಅನಿವಾರ್ಯವಾಗುತ್ತದೆ ಎಂದು ಎಚ್ವರಿಸಿದರು.
ಪೊಲೀಸರಿಗೆ ನಮ್ಮ ಸರ್ಕಾರ ಸಂಪೂರ್ಣ ಫ್ರೀ ಹ್ಯಾಂಡ್ ಕೊಟ್ಟಿದೆ. ಪೊಲೀಸರ ಕೆಲಸದಲ್ಲಿ ಮೂಗು ತೂರಿಸಬಾರದು ಎನ್ನುವುದು ನನ್ನ ಬದ್ಧತೆ. ಆದರೆ ನಾವು ಫ್ರೀ ಹ್ಯಾಂಡ್ ಕೊಟ್ಟಿದ್ದು ದುರುಪಯೋಗ ಆಗಬಾರದು. ಅದು ಜನರಿಗೆ ಅನುಕೂಲ ಆಗುವಂತಿರಬೇಕು ಎಂದು ಸೂಚಿಸಿದರು.
ವರ್ಗಾವಣೆಗಳಿಗೆ ಪೊಲೀಸ್ ಅಧಿಕಾರಿಗಳು ಹಾತೊರೆಯುವುದು, ಜಾತಿ ಬಳಸುವುದು ಅತ್ಯಂತ ಕೆಟ್ಟದ್ದು. ಹಾಗೆ ಮಾಡಬೇಡಿ ಎಂದು ಸಿಎಂ ಸಿದ್ದರಾಮಯ್ಯ ತಿಳಿ ಹೇಳಿದರು.
ನಮ್ಮದು ಜಾತ್ಯತೀತ ರಾಷ್ಟ್ರ. ನಾವುಗಳೇ ನಮ್ಮ ಸಂವಿಧಾನದ ಆಶಯಗಳನ್ನು ಬಲಪಡಿಸಬೇಕು ಎಂದರು.
ಆಧುನಿಕ ತಂತ್ರಜ್ಞಾನದ ಬಳಕೆಯಿಂದ ಅಪರಾಧ ಪ್ರಕರಣಗಳಿಗೆ ಕಡಿವಾಣ ಸಾಧ್ಯವಿದೆ. ಕರ್ನಾಟಕ ನಾಮಕರಣಗೊಂಡು, ಏಕೀಕರಣದ 50 ವರ್ಷದ ನೆನಪಿಗಾಗಿ ಸುವರ್ಣ ಪೊಲೀಸ್ ಭವನ ಕಟ್ಟಡ ನಿರ್ಮಾಣಕ್ಕೆ ಬಜೆಟ್ ನಲ್ಲಿ ಹಣ ನೀಡಲಾಗು ವುದು. ಖಾಲಿ ಇರುವ ಪೊಲೀಸ್ ಹುದ್ದೆಗಳನ್ನೂ ಭರ್ತಿ ಮಾಡಲಾಗುವುದು ಎಂದು ಇದೇ ಸಂದ ರ್ಭದಲ್ಲಿ ಭರವಸೆ ನೀಡಿದರು.
ಗೃಹ ಸಚಿವರಾದ ಜಿ.ಪರಮೇಶ್ವರ್, ಗೃಹ ಕಾ ರ್ಯದರ್ಶಿ ಉಮಾಶಂಕರ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ತ್ರಿಲೋಕ್ ಚಂದ್ರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು ಮತ್ತು‌ ನಸೀರ್ ಅಹಮದ್ ಅವರು ಉಪಸ್ಥಿತರಿದ್ದರು.

ಇತರೆ ಹೈಲೈಟ್ಸ್
ಕಾನೂನು ಸುವ್ಯವಸ್ಥೆ ಚೆನ್ನಾಗಿದ್ದರೆ ರಾಜ್ಯದ ಅಭಿವೃದ್ಧಿ ಸಾಧ್ಯ. ಜನರ ತಲಾ ಆದಾಯ ಮತ್ತು GDP ಹೆಚ್ಚಾಗುತ್ತದೆ. ಹೂಡಿಕೆದಾರರು ಬರು ತ್ತಾರೆ. ಆದ್ದರಿಂದ ಕಾನೂನು ಸುವ್ಯವಸ್ಥೆಯನ್ನು ಸರಿಯಾಗಿ ಕಾಪಾಡಿ
ಕಳ್ಳತನ ಹೆಚ್ಚಾಗ್ತಾ ಇದೆ ಎಂದರೆ ಗಸ್ತು ವ್ಯವಸ್ಥೆ, ಹೋಯ್ಸಳ ಸಿಬ್ಬಂದಿ ಮತ್ತು ಠಾಣಾಧಿಕಾರಿಗಳು ವೈಫಲ್ಯರಾಗಿದ್ದಾರೆ ಎಂದೇ ಅರ್ಥ
ಇದೇ ಸ್ಥಿತಿ ಮುಂದುವರೆದರೆ DCP ಗಳನ್ನು ಕರ್ತವ್ಯಲೋಪಕ್ಕೆ ಹೊಣೆ ಮಾಡಲಾಗುವುದು
ಅಧಿಕಾರಿಗಳು ಪ್ರಸ್ತುತ ಪಡಿಸಿದ ಅಂಕಿ ಅಂಶ ತೃಪ್ತಿಕರವಾಗಿಲ್ಲ. ಮುಂದಿನ ವರ್ಷದ ವೇಳೆಗೆ ಕಾರ್ಯಕ್ಷಮತೆ ಉತ್ತಮವಾಗಿರಲಿ

Megha News