Live Stream

November 2024
S M T W T F S
 12
3456789
10111213141516
17181920212223
24252627282930

| Latest Version 9.4.1 |

State News

ಸುಪ್ರೀಂಕೋರ್ಟ್ ವಿಶ್ರಾಂತ ನ್ಯಾಯಮೂರ್ತಿ ಶಿವರಾಜ ವಿ.ಪಾಟೀಲ್‌ರಿಗೆ ಸಂಸ್ಕೃತಿ ದತ್ತಿ ಪ್ರಶಸ್ತಿ ಪ್ರದಾನ

ಸುಪ್ರೀಂಕೋರ್ಟ್ ವಿಶ್ರಾಂತ ನ್ಯಾಯಮೂರ್ತಿ ಶಿವರಾಜ ವಿ.ಪಾಟೀಲ್‌ರಿಗೆ ಸಂಸ್ಕೃತಿ ದತ್ತಿ ಪ್ರಶಸ್ತಿ ಪ್ರದಾನ

ರಾಯಚೂರು. ಸುಪ್ರೀಂ ಕೋರ್ಟ್ ವಿಶ್ರಾಂತ ನ್ಯಾಯಮೂರ್ತಿ ಶಿವರಾಜ ವಿ.ಪಾಟೀಲ್ ಅವರಿಗೆ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಬೆಂಗಳೂರಿನಲ್ಲಿ ಶ್ರೀ ಕೆಂಗಲ್ ಹನುಮಂತಯ್ಯ ಸಂಸ್ಕೃತಿ ದತ್ತಿ ಪ್ರಶಸ್ತಿ ನೀಡಿ ಗೌರವಿಸಿತು.

2021 ಸಾಲಿನ ಪ್ರಶಸ್ತಿಗೆ ನ್ಯಾಯಮೂರ್ತಿ ಶಿವರಾಜ ವಿ. ಪಾಟೀಲ್ ನ್ಯಾಯಾಂಗ ಕ್ಷೇತ್ರದ ಅನರ್ಘ್ಯ ರತ್ನ ಎಂಬುದು ಹೆಮ್ಮೆಯ ಸಂಗತಿ.
ರಾಜಕೀಯ ಮುತ್ಸದ್ದಿಗಳು ಹಾಗೂ ಧೀಮಂತ ಸಾತ್ವಿಕ ರಾಜಕಾರಣೀಯೂ ಶ್ರೀ ಕೆಂಗಲ್ ಹನುಮಂತಯ್ಯ ಅವರ ಹೆಸರಿನಲ್ಲಿ ಬೆಂಗಳೂರಿನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸ್ಥಾಪಿಸಿರುವ ಶ್ರೀ ಕೆಂಗಲ್ ಹನುಮಂತಯ್ಯ ಸಂಸ್ಕೃತಿ ದತ್ತಿ ಪ್ರಶಸ್ತಿಯನ್ನು ಸಂಸ್ಕೃತಿ, ಸಾಹಿತ್ಯ ಹಾಗೂ ವಿವಿಧ ಮಹತ್ವದ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದವರಿಗೆ 2015ರಿಂದ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ.
ಈ ವರ್ಷದ ಪ್ರಶಸ್ತಿಗೆ ನ್ಯಾಯಮೂರ್ತಿ ಶಿವರಾಜ ವಿ.ಪಾಟೀಲ್ ಅವರು ಭಾಜನರಾಗಿದ್ದಾರೆ.

Megha News