ರಾಯಚೂರು: ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಉಲ್ಲಂಘಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ರಾಮು ಇವರನ್ನು ಜಿಲ್ಲಾ ಚುನಾವಣಾಧಿಕಾರಿಗಳು ಅಮಾನತುಗೊಳಿಸಿ ಆದೇಶಿಸಿದ್ದಾರೆ.
ಕೆಪಿ ನಂಜುಂಡಿ ಇವರ ನಿವಾಸದಲ್ಲಿ ಡಿಸಿಎಂ ಡಿಕೆ ಶಿವು ಕುಮಾರ್ ಬೇಟಿ ನೀಡಿ, ಉಪಹಾರ ಸೇವಿಸುವ ಸಂದರ್ಭದಲ್ಲಿ ಊಟ ಬಡಿಸುತ್ತಿರುವ
ಸಹ ಶಿಕ್ಷಕ ರಾಮು ಅವರ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಈ ಬಗ್ಗೆ ಚುನಾವಣಾ ನೋಡಲ್ ಅಧಿಕಾರಿಗಳು ಪರಿಶೀಲಿಸಿದ್ದಾರೆ, ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ಮಾಹಿತಿ ಪಡೆದು ಪೂಜಾ ಕಾರ್ಯಕ್ರಮವೆಂದು ಹೇಳಿ ಅತಿಥಿಗಳಿಗೆ ಊಟೊಪಚಾರ ವ್ಯವಸ್ಥೆಯಲ್ಲಿ ಭಾಗಿಯಾಗಿದ್ದರು, ಇದರಲ್ಲಿ ರಾಜಕೀಯ ನಾಯಕರು ಭಾಗವಹಿಸಿದ್ದು ಕಂಡು ಬಂದಿದೆ.
ಸರ್ಕಾರಿ ನೌಕರನಾಗಿದ್ದು, ಸರ್ಕಾರಿ ಕೆಲಸದಲ್ಲಿ ನಿರ್ಲಕ್ಷ್ಯತನ, ಕೇಂದ್ರ ಸ್ಥಾನ ಬಿಡುಗಡೆಯಾಗಲು ಅನುಮತಿ ಪಡೆಯದೇ ನೀತಿ ಸಂಹಿತೆ ಜಾರಿ ಸಮಯದಲ್ಲಿ ರಾಜಕೀಯ ವ್ಯಕ್ತಿಗಳ ಜೊತೆಯಲ್ಲಿ ಕಂಡು ಬಂದಿದ್ದು, ಕರ್ತವ್ಯಲೋಪವೆಸಗಿ ಕಂಡು ಬಂದಿದೆ.
ಇಲಾಖೆ ವಿಚಾರಣೆ ಕಾಯ್ದಿರಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತು ಗೊಳಿಸಿ ಜಿಲ್ಲಾ ಚುನಾವಣಾಧಿಕಾರಿಗಳು
ಆದೇಶಿದ್ದಾರೆ.