ರಾಯಚೂರು: ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ವತಿಯಿಂದ 2024-25ನೇ ಸಾಲಿನ ಅಂತರ ವಿಭಾಗ ಮಟ್ಟದ ವರ್ಗಾವಣೆ ಕೌನ್ಸೆಲಿಂಗ್ ವೇಳಾಪಟ್ಟಿ ಪ್ರಕಟಿಸಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕೆ.ಡಿ.ಬಡಿಗೇರ ತಿಳಿಸಿದ್ದಾರೆ.
ವರ್ಗಾವಣೆ ಕೌನ್ಸೆಲಿಂಗ್ ಪ್ರಕ್ರಿಯೆ ರೌಂಡ್ ರೋಬಿನ್‍ನಂತೆ ಇದೇ ಆ.19ರಿಂದ 27ರವರೆಗೆ ಬೆಳಿಗ್ಗೆ 9ರಿಂದ ಸಂಜೆ 7 ಗಂಟೆಯವರೆಗೆ ನಗರದ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ನಡೆಯಲಿದೆ.
19ರಂದು ಮುಖ್ಯಶಿಕ್ಷಕರ, ಹಿರಿಯ ಮುಖ್ಯಶಿಕ್ಷಕರ, ದೈಹಿಕ ಶಿಕ್ಷಣ ಶಿಕ್ಷಕರ, ವಿಶೇಷ ಶಿಕ್ಷಕರ, ಆಗಸ್ಟ್ 20ರಂದು ಪ್ರಾಥಮಿಕ ಶಾಲಾ ಸಹ ಶಿಕ್ಷಕರ, ಆ.21ರಿಂದ 27 ರ ವರೆಗೆ ಪ್ರಾಥಮಿಕ ಶಾಲಾ ಸಹ ಶಿಕ್ಷಕರ ವೃಂದ ಹಾಗೂ ಆ.22ರಂದು ಪ್ರೌಢಶಾಲೆಯ ವಿಶೇಷ ಶಿಕ್ಷಕರ, ದೈಹಿಕ ಶಿಕ್ಷಣ ಶಿಕ್ಷಕರ, ಪ್ರೌಢಶಾಲಾ ಸಹ ಶಿಕ್ಷಕರ ಹಾಗೂ ಆ.23, 27 ರಂದು ಪ್ರೌಢಶಾಲಾ ಸಹ ಶಿಕ್ಷಕರ ಕೌನ್ಸೆಲಿಂಗ್ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.