ರಾಯಚೂರು. ತೆರೆದ ಭಾವಿಯಲ್ಲಿ ಯುವಕ ನೊರ್ವನ ಶವ ಪತ್ತೆಯಾಗಿರುವ ಮೃತಪಟ್ಟ ಘಟನೆ ಲಿಂಗಸುಗೂರು ತಾಲೂಕಿನ ಐದನಾಳ ಗ್ರಾಮದ ಹೊರವಲಯದಲ್ಲಿ ಜರುಗಿದೆ.
ಯುವಕನ ಶವ ಗಣೇಶ ಮಾನಪ್ಪ (21) ಸೋಮಲಾಪುರ ಗ್ರಾಮದವರೆಂದು ಎಂದು ಗುರುತಿಸಲಾಗಿದೆ.
ಮದ್ಯದ ಅಮಲಿನಲ್ಲಿ ವೇಳೆ ಕಾಲು ಜಾರಿ ಬಾವಿಗೆ ಬಿದ್ದಿರಬಹುದು, ಅಥವಾ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕೆ ವ್ಯಕ್ತವಾಗಿದೆ.
ಸ್ಥಳಕ್ಕೆ ಲಿಂಗಸುಗೂರು ಡಿವೈಎಸ್ಪಿ ದತ್ತಾತ್ರೆಯ ಕಾರ್ನಾಡ್, ಪೊಲೀಸ್ ಇನ್ಸ್ ಪೆಕ್ಟರ್ ಪುಂಡಲೀಕ ಪಟತ್ತರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಸ್ಥಳೀಯ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಯಿತು.
ಈ ಕುರಿತು ಲಿಂಗಸೂಗುರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.