ರಾಯಚೂರು. ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಬೀದಿ ನಾಯಿಗಳ ಹಾವಳಿ ಮಿತಿ ಮೀರಿದ್ದು ಮಕ್ಕಳು ಸೇರಿದಂತೆ ಬಹುತೇಕ ಜನರ ಮೇಲೆ ದಾಳಿ ಮಾಡುತ್ತಿರುವ ಪ್ರಕರಣಗಳ ನಿರಂತರವಾಗಿ ನಡೆಯುತ್ತಲೇ ಇವೆ, ಇತ್ತೀಚೆಗೆ ಮಗು ಸಾವನಪ್ಪಿದ್ದ ಘಟನೆ ನಡೆದಿದೆ, ಆದರೆ ಈ ಬಗ್ಗೆ ಜಿಲ್ಲಾಡಳಿತ ಸೂಕ್ರ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದೆ.
ಜಿಲ್ಲೆಯಲ್ಲಿ ಬೀದಿ ನಾಯಿಗಳ ಹಾವಳಿ ಮಿತಿಮೀರಿ ಸಾರ್ವಜನಿಕರು ನಡೆದುಕೊಂಡು ಹೋಗುತ್ತಿರುವ ವೇಳೆ ದಾಳಿ ಮಾಡಿ ಗಾಯಗೊ ಳಿಸಿವೆ, ಸಿಂಧನೂರು, ಲಿಂಗಸೂಗುರು, ಮಾನವಿ ಮತ್ತು ರಾಯಚೂರು ನಗರದಲ್ಲಿ ದಾಳಿ ನಡೆಸಿರುವ ಪ್ರಕರಣಗಳು ನಡೆದಿವೆ.
ನಗರ ಪ್ರದೇಶದಲ್ಲಿ ಬೀದಿ ನಾಯಿಗಳ ದಾಳಿ ಒಂದು ಕಡೆಯಾದರೆ ಇತ್ತ ಗ್ರಾಮೀಣ ಪ್ರದೇಶ ದಲ್ಲಿಯೂ ಬೀದಿ ನಾಯಿಗಳ ಹಾವಳಿ ಹೆಚ್ಚಾ ಗಿದೆ, ನಗರ ಪ್ರದೇಶಕ್ಕಿಂತ ಗ್ರಾಮೀಣ ಭಾಗದಲ್ಲೇ ಬೀದಿ ನಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿವೆ. ಜೊತೆಗೆ ಬಹುತೇಕ ದಾಳಿ ಪ್ರಕರಣಗಳು ನಡೆದಿದ್ದರೂ ಪ್ರಕರಣಗಳು ಬೆಳಕಿಗೆ ಬಂದಿಲ್ಲ, ಕಳೆದ ಒಂದು ವಾರದ ಹಿಂದೆಯಷ್ಟೆ ತಾಲೂಕಿನ ಕೊರವಿಹಾಳ ಗ್ರಾಮದಲ್ಲಿ 7 ಜನ ಮಕ್ಕಳ ಮೇಲೆ ಬೀದಿನಾಯಿ ದಾಳಿ ನಡೆಸಿದ್ದು, ಲಾವಣ್ಯ ಎನ್ನುವ ಬಾಲಕಿ ಮೃತಪಟ್ಟರೆ 6 ಮಕ್ಕಳು ಚಿಕಿತ್ಸೆ ಪಡೆದಿದ್ದಾರೆ. ಇದೀಗ ಬೀದಿನಾಯಿ ದಾಳಿಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳ ಪೋಷಕರು ಆಂತಕ ಎದುರಾಗಿದೆ.
ಮಕ್ಕಳ ಗುಣ ಮುಖರಾಗಲು ಮನೆಯಲ್ಲಿಯೇ ಚಿಕಿತ್ಸೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಗ್ರಾಮೀಣ ಭಾಗದ ಮಾಂಸ ಮಾರಾಟ ಅಂಗಡಿಗಳ ಮುಂದೆ ನಾಯಿಗಳು ಮಾಂಸದ ಆಹಾರಕ್ಕಾಗಿ ಪರತಪಿಸುತ್ತಿವೆ, ಮಾಂಸದ ರುಚಿಯಿಂದ ಜನರ ಮೇಲೆ ದಾಳಿ ಮಾಡುತ್ತಿವೆ.
ಸ್ಥಳೀಯ ಗ್ರಾಮ ಪಂಚಾಯತಿಯ ಅಧಿಕಾರಿಗಳಿಗೆ ಮತ್ತು ಸದಸ್ಯರಿಗೆ ಗ್ರಾಮಸ್ಥರು ಮಾಹಿತಿ ನೀಡಿದರೂ ಯಾವುದೇ ಕ್ರಮ ಕೈಗೊಳ್ಳಲು ಮುಂದಾಗಿಲ್ಲವೆಂದು ಗ್ರಾಮಸ್ಥರು ದೂರಿದ್ದಾರೆ.
ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ ಸಿಇಒ ಅವರು ಈ ಬಗ್ಗೆ ಹೆಚ್ಚಿನ ಗಮನ ಹರಿಸಿ ಸ್ಥಳಿಯ ಗ್ರಾಪಂ ಅಧಿಕಾರಿಗಳಿಗೆ ಸೂಚನೆ ನೀದಿ ಬೀದಿ ನಾಯಿಗಳ ಸಾಗಾಟಕ್ಕೆ ಕ್ರಮ ವಹಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.