ರಾಯಚೂರು. ಪಟಾಕಿ ಮಾರಾಟ ಮಳಿಗೆಗಳಲ್ಲಿ 18 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ಬಳಸಿ ಕೊಳ್ಳುವಂತಿಲ್ಲ ಒಂದು ವೇಳೆ ಬಳಸಿಕೊಂಡಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕಾರ್ಮಿಕ ಇಲಾಖೆಯು ಆದೇಶ ಹೊರಡಿಸಿತ್ತು,
ಈ ಆದೇಶ ಹೆಸರಿಗೆ ಮಾತ್ರ ಎನ್ನುವಂತಾಗಿದೆ,
ಕಾರ್ಮಿಕ ಇಲಾಖೆಯು ಬಾಲ ಕಾರ್ಮಿಕತೆ ತಡೆಗಟ್ಟಲು ಹಾಗೂ ಇತ್ತೀಚೆಗೆ ಪಟಾಕಿಗಳ ದುರಂತದಲ್ಲಿ ಮಕ್ಕಳ ಸಾವುಗಳ ಹಿನ್ನೆಲೆಯಲ್ಲಿ
ಒಂದು ಹೆಜ್ಜೆ ಮುಂದೆ ಹೋಗಿ, ದೀಪಾವಳಿ ಹಬ್ಬ ಹಿನ್ನೆಲೆಯಲ್ಲಿ ಪಟಾಕಿ ಅಂಗಡಿಗಳಲ್ಲಿ ಕೆಲಸಕ್ಕೆ ಮಕ್ಕಳನ್ನು ಬಳಸಿಕೊಳ್ಳಬಾರದೆಂದು ಆದೇಶ ಹೊರಡಿಸಿದೆ.
ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಮಕ್ಕಳ ದುಡಿಮೆಯನ್ನು ನಿಯಂತ್ರಿಸಲು ಹಾಗೂ ನಿಷೇಧಿಸಲು ಬಾಲ್ಯಾವಸ್ಥೆ ಹಾಗೂ ಕಿಶೋರಾ ವಸ್ಥೆ ಕಾರ್ಮಿಕ ( ನಿಷೇಧ ಹಾಗೂ ನಿಯಂತ್ರಣ) ಕಾಯ್ದೆ 1986ರ ತಿದ್ದುಪಡಿ 2016ರ ಅನ್ವಯ ಎಲ್ಲಾ ಉದ್ಯೋಗ ಮತ್ತು ಪ್ರಕ್ರಿಯೆಗಳಲ್ಲಿ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ, 14 ರಿಂದ 18 ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸಕ್ಕೆ ನಿಯೋಜಿಸಿಕೊ ಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ,
ಜಿಲ್ಲೆಯಲ್ಲಿ ದೀಪಾವಳಿ ಹಬ್ಬ ಅಂಗವಾಗಿ ಪಟಾಕಿ ಮಳಿಗೆಗಳನ್ನು ಸ್ಥಾಪಿಸಲಾಗಿದ್ದು, ಪಟಾಕಿ ತಯಾರಿಕೆ, ಮಾರಾಟ ಹಾಗೂ ಯಾವುದೇ ಕಾರಣಕ್ಕೂ 18 ವರ್ಷದ ಒಳಗಿನ ಮಕ್ಕಳನ್ನು ಕೆಲಸಕ್ಕೆ ಬಳಸಿಕೊಳ್ಳಬಾರದು ತಪ್ಪಿದಲ್ಲಿ ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕ( ನಿಷೇಧ ಹಾಗೂ ನಿಯಂತ್ರಣ ಕಾಯ್ದೆ) ರಡಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಕಾರ್ಮಿಕ ಇಲಾಖೆಯ ಅಧಿಕಾರಿ ತಿಳಿಸಿದೆ.
ಕಾರ್ಮಿಕ ಇಲಾಖೆ ಒಂದು ಹೆಜ್ಜೆ ಮುಂದೆ ಹೋಗಿ ಎಚ್ಚರಿಕೆ ನೀಡಿದರೆ, ಪಟಾಕಿ ಮಳಿಗೆಗಳ ಮಾಲೀಕರು ಮಕ್ಕಳನ್ನು ಕೆಲಸಕ್ಕೆ ಬಳಸಿಕೊಳ್ಳದೆ ತಮ್ಮ ಮಕ್ಕಳು ಹಾಗೂ ತಮ್ಮ ಸಂಬಂಧಿಕರ ಮಕ್ಕಳನ್ನು ಅಂಗಡಿಗಳಲ್ಲಿ ಇಟ್ಟು ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ, ಈ ಬಗ್ಗೆ ವಿಚಾರಿಸಿದರೆ ಮಕ್ಕಳನ್ನು ಕೆಲಸಕ್ಕೆ ಇಟ್ಟುಕೊಂಡಿಲ್ಲ, ಇವರೆಲ್ಲ ನಮ್ಮ ಮಕ್ಕಳು, ನಮ್ಮ ಸಂಬಂಧಿಕರ ಮಕ್ಕಳು ಎಂದು ಸಮಜಾಯಿಷಿ ಉತ್ತರ ನೀಡಿದ್ದಾರೆ.
ಪಟಾಕಿ ತಯಾರಿಕೆ ಮತ್ತು ಮಾರಾಟದ ಸಂದರ್ಭದಲ್ಲಿ ಅವಘಡ ಉಂಟಾಗಿ ಮಕ್ಕಳ ಪ್ರಾಣ ಹಾನಿ ತಪ್ಪಿಸುವ ಉದ್ದೇಶದಿಂದ ಕಾರ್ಮಿಕ ಇಲಾಖೆ ಒಂದು ಹೆಜ್ಜೆ ಮುಂದೆ ಹೋಗಿ ಮಕ್ಕಳನ್ನು ಕೆಲಸಕ್ಕೆ ಬಳಸಿಕೊಳ್ಳಬಾರದು ಎಂದು ಆದೇಶ ನೀಡಿದರೆ, ಪಟಾಕಿ ಮಾರಾಟ ಮಳಿಗೆಗಳ ಮಾಲೀಕರು ತಮ್ಮ ಮಕ್ಕಳು, ತಮ್ಮ ಸಂಬಂಧಿಕರ ಮಕ್ಕಳನ್ನು ಇಟ್ಟುಕೊಂಡು ಮತ್ತೊಂದು ಹೆಜ್ಜೆ ಇಟ್ಟಿದ್ದಾರೆ.
ಒಟ್ಟಾರೆಯಾಗಿ ಕಾರ್ಮಿಕ ಇಲಾಖೆಯ ಆದೇಶ ಪಾಲನೆ ಮಾಡಿದಂತೆ ಇರಬೇಕು, ಇತ್ತ ಮಕ್ಕಳನ್ನು ಕೆಲಸಕ್ಕೆ ಬಳಸಿಕೊಂಡಿಂತೆ ಇರಬೇಕು ಎನ್ನುವಂತೆ ಪಟಾಕಿ ಮಳಿಗೆಗಳ ಮಾಲೀಕರು ಮುಂದಾಗಿದ್ದು, ಇದಕ್ಕೆ ಕಾರ್ಮಿಕ ಇಲಾಖೆಯು ಮತ್ತೊಂದು ಹೆಜ್ಜೆ ಮುಂದೆ ಹೋಗಿ ಮಕ್ಕಳ ರಕ್ಷಣೆಗೆ ಒತ್ತು ನೀಡುತ್ತಾ ಇಲ್ಲವೋ ಎಂದು ಕಾದು ನೋಡಬೇಕಾಗಿದೆ.