Live Stream

June 2025
S M T W T F S
1234567
891011121314
15161718192021
22232425262728
2930  

| Latest Version 9.4.1 |

State News

ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆಗೆ ಯಾವುದೇ ಹೊಸ ಮಾರ್ಗಸೂಚಿಯನ್ನು ಇಲ್ಲ

ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆಗೆ ಯಾವುದೇ ಹೊಸ ಮಾರ್ಗಸೂಚಿಯನ್ನು ಇಲ್ಲ

ಬೆಂಗಳೂರು.ಕೋವಿಡ್‌ನ ಕುಲಾಂತರಿ JN.1 ವೈರಾಣು ಹರಡುವಿಕೆ ತಡೆಯಲು ಮುನ್ನೆಚ್ಚರಿಕೆಯೇ ಮದ್ದಾಗಿದ್ದು, ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆಗೆ ಯಾವುದೇ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕೋವಿಡ್-19ರ ಪರಿಸ್ಥಿತಿ ಕುರಿತು ಉನ್ನತ ಮಟ್ಟ ದ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ. ಜನಸಂದಣಿ ಹೆಚ್ಚು ಇರುವ ಪ್ರದೇಶಗಳಲ್ಲಿ ಮಾಸ್ಕ್ ಧರಿಸಬೇಕು. ಮಾರ್ಗಸೂಚಿ ಬಗ್ಗೆ ಸಚಿವ ಸಂಪುಟ ಉಪ ಸಮಿತಿಯಲ್ಲಿ ಚರ್ಚಿಸಲಾಗುವುದು’ ಎಂದಿದ್ದಾರೆ.

‘ಕೋವಿಡ್‌ಗೆ ಸಂಬಂಧಿಸಿದಂತೆ ತಾಂತ್ರಿಕ ಸಲಹಾ ಸಮಿತಿ ನೀಡುವ ಸಲಹೆಯನ್ನು ಸರ್ಕಾರ ಅನುಸರಿಸಲಿದೆ. ಮುಂದಿನ ದಿನಗಳಲ್ಲಿ ತಾಂತ್ರಿಕ ಸಲಹಾ ಸಮಿತಿ ನೀಡುವ ಸಲಹೆಗಳನ್ನು ಅನುಸರಿಸಲಾಗುವುದು’ ಎಂದು ಹೇಳಿದ್ದಾರೆ.

‘ಬೆಂಗಳೂರಿನಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ ಮೂರಕ್ಕೆ ಏರಿದೆ. ಕರ್ನಾಟಕದಲ್ಲಿ ಪ್ರಸ್ತುತ 92 ಸಕ್ರಿಯ ಪ್ರಕರಣಗಳು ವರದಿಯಾಗಿವೆ. ಇದರಲ್ಲಿ ಬೆಂಗಳೂರಿನಲ್ಲೇ 80 ಪ್ರಕರಣಗಳಿವೆ. 72 ಜನ ಮನೆಯಲ್ಲೇ ಪ್ರತ್ಯೇಕವಾಸದಲ್ಲಿದ್ದಾರೆ. 20 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನೆರೆಯ ಕೇರಳದಲ್ಲಿ 2041, ತಮಿಳುನಾಡಿನಲ್ಲಿ 77, ಮಹಾರಾಷ್ಟ್ರದಲ್ಲಿ 35, ಗೋವಾದಲ್ಲಿ 23 ಹಾಗೂ ಗುಜರಾತ್‌ನಲ್ಲಿ 12 ಸಕ್ರಿಯ ಪ್ರಕರಣ ಗಳು ವರದಿಯಾಗಿವೆ’ ಎಂದು ಮುಖ್ಯಮಂತ್ರಿ ಮಾಹಿತಿ ನೀಡಿದ್ದಾರೆ.

Megha News