Raichur cmcರಾಯಚೂರು: ರಾಯಚೂರು ನಗರಸಭೆಯನದನು ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೆಗೇರಿಸಿದ ಬೆನ್ನಲ್ಲೆ ಇದೀಗ ರಾಯಚೂರು ಮಹಾನಗರ ಪಾಲಿಕೆಗೆ ವಲಯ ಆಯುಕ್ತರು ಹಾಗೂ ಉಪ ಆಯುಕ್ತರನ್ನಾಗಿ ಇಬ್ಬರು ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ನೇಮಿಸಲಾಗಿದೆ.
ಈ ಹಿಂದೆ ನಗರಸಭೆ ಪೌರಾಯುಕ್ತರಾಗಿದ್ದು ಗುರುಸಿದ್ದಯ್ಯ ಹಿರೆಮಠ ಅವರನ್ನು ರಾಯಚೂರು ಮಹಾನಗರ ಪಾಲಿಕೆಯ ಉಪ ಆಯುಕ್ತರು(ಆಡಳಿತ) ಹುದ್ದೆಗೆ ವರ್ಗಾವಣೆ ಮಾಡಲಾಗಿದ್ದು, ಪಾಲಿಕೆಯ ವಲಯ ಆಯುಕ್ತರನ್ನಾಗಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿದ್ದ ಮಹೆಬೂಬ್ ಜಿಲಾನಿ ಅವರನದನು ವರ್ಗಾವಣೆಗೊಳಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ಎಚ್.ಕೇಶವ ಪ್ರಸಾದ್ ಅಧಿಸೂಚನೆ ಹೊರಡಿಸಿದ್ದಾರೆ.