ಲಿಂಗಸೂಗೂರು. ವೇಶ್ಯಾವಾಟಿಕೆ ನಡೆಯುತ್ತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿರುವ ಘಟನೆ ತಾಲ್ಲೂಕಿನ ಮುದಗಲ್ ಪಟ್ಟಣದ ಆಮ ದಿಹಾಳ ಗ್ರಾಮದಲ್ಲಿ ನಡೆದಿದೆ.
ದಾಳಿ ವೇಳೆ ವೆಂಕಟೇಶ ಅಮರೇಶ (33) ಮತ್ತು ಲತಾ ಶ್ರೀನಿವಾಸ್ (38) ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.
ಆಮದಿಹಾಳ ಗ್ರಾಮದ ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಕುರಿತು ಖಚಿತ ಮಾಹಿತಿ ಮೇರೆಗೆ ಮಸ್ಕಿ ಸಿಪಿಐ ಬಾಲಚಂದ್ರ ಅವರ ನೇತೃತ್ವದ ತಂಡ ದಾಳಿ ಮಾಡಿಸಿದ್ದರು. ಈ ವೇಳೆ ಮಹಿಳೆ ಮತ್ತು ಸೇರಿ ಒಬ್ಬರನ್ನು ಪೋಲಿಸರು ವಶಕ್ಕೆ ಪಡೆದುಕೊಂಡಿದ್ದು ಸಂತ್ರಸ್ತೆಯನ್ನು ರಕ್ಷಣೆ ಮಾಡಿ, ಸಾಂತ್ವನ ಕೇಂದ್ರಕ್ಕೆ ಕಳಿಸಿದ್ದಾರೆ.
ಈ ಕುರಿತು ಲಿಂಗಸೂಗುರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.