ರಾಯಚೂರು. ರಾಯಚೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕುಮಾರ ನಾಯಕ ಅವರು ಮತಯಾಚನೆ ಮೆರವಣಿಗೆ ಮತ್ತು ಸಭೆಯಲ್ಲಿ ಮಕ್ಕಳನ್ನು ಬಳಕೆ ಮಾಡಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪ ಕೇಳಿ ಬಂದಿದೆ.
ತಾಲೂಕಿನ ಮನ್ಸಲಾಪೂರ ಗ್ರಾಮದಲ್ಲಿ ಶುಕ್ರವಾರ ಸಂಜೆ ಗ್ರಾಮೀಣ ಶಾಸಕ ದದ್ದಲ್ ಬಸನಗೌಡ ಅವರ ನೇತೃತ್ವದಲ್ಲಿ ತಾಯಮ್ಮ ದೇವಸ್ಥಾನದಿಂದ ಆಂಜನೇಯ ದೇವಸ್ಥಾನ ದವರೆಗೆ ಮೆರವಣಿಗೆ ನಡೆಸಲಾಯಿತು.
ಮೆರವಣಿಗೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂ ಡರು ಜೊತೆಗೆ ಗ್ರಾಮದ ಮುಖಂಡರು, ಯುವ ಕರು ಜೊತೆಗೆ ಮಕ್ಕಳು ಭಾಗವಹಿಸಿದ್ದರು.
ಗ್ರಾಮದ ಹಗಸೆ ಕಟ್ಟೆಯ ಮುಂಭಾಗದಲ್ಲಿ ಸಭೆ ನಡೆಸಲಾಯಿತು.
ಸಭೆಯಲ್ಲಿ ಗ್ರಾಮಸ್ಥರು ಮಹಿಳೆಯರು, ಯುವಕರು ಭಾಗವಹಿಸಿದ್ದು, ಜೊತೆಗೆ ಮಕ್ಕಳು ಸಹ ಕಾಂಗ್ರೆಸ್ ಪಕ್ಷದ ಶಾಲು ಹಾಕಿಕೊಂಡಿದ್ದು, ಕಂಡು ಬಂದಿದೆ. ಸಭೆಯಲ್ಲಿ ಹೆಚ್ಚಾಗಿ ಮಕ್ಕಳ ಕಂಡು ಬಂದಿದ್ದರು ಎಂದು ಹೇಳಲಾಗಿದೆ, ಮಕ್ಕಳನ್ನು ಪ್ರಚಾರಕ್ಕೆ ಬಳಸಿಕೊಳ್ಳುವಂತಿಲ್ಲ ಒಂದು ವೇಳೆ ಬಳಸಿಕೊಂಡಲ್ಲಿ ದಂಡ ಮತ್ತು ಶಿಕ್ಷೆ ವಿಧಿಸಲಾಗುತ್ತದೆ ಎಂದು ಚುನಾವಣಾ ಆಯೋಗ ಆದೇಶಿಸಿ, ಆದರೆ ಮತಯಾಚನೆ ವೇಳೆ ಮೆರವಣಿಗೆ ಮತ್ತು ಸಭೆಯಲ್ಲಿ ಮಕ್ಕಳ ಕಾಂಗ್ರೆಸ್ ಪಕ್ಷದ ಶಾಲು ಹಾಕಿ ಕೊಂಡಿದ್ದು ಕಂಡು ಬಂದಿದ್ದು ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ.