ರಾಯಚೂರು. ಜಿಲ್ಲಾಡಳಿತ ವತಿಯಿಂದ ಹಮ್ಮಿಕೊಂಡ 75ನೇ ಗಣರಾಜ್ಯೋತ್ಸವ ದಿನಾಚರಣೆ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಮಾಡಲಾಗಿದೆ.
ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ವತಿಯಿಂದ 75ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಜಿಲ್ಲಾ ಉಸ್ತುವಾರಿ ಹಾಗೂ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಹಾಗೂ ಉದ್ಯಮಶೀಲತೆ ಇಲಾಖೆ ಸಚಿವ ಡಾ.ಶರಣ ಪ್ರಕಾಶ ಪಾಟೀಲ್ ಅವರು ಧ್ವಜಾರೋಹಣ ನೆರವೇರಿಸಿದರು.
ಈ ಕಾರ್ಯಕ್ರಮದ ವೇದಿಕೆಯಲ್ಲಿ ಶಿಷ್ಟಾಚಾರ ನಿಯಮದಂತೆ ಸಚಿವರು, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಎಪಿಎಂಸಿ ಅಧ್ಯಕ್ಷ, ಹಾಗೂ ಅಧಿಕಾರಿಗಳಿಗೆ ಮಾತ್ರ ಅವಕಾಶ ಒದಗಿಸಲಾಗಿತ್ತು.
ಆದರೆ ವೇದಿಕೆಯಲ್ಲಿ ಕಾಂಗ್ರೆಸ್ ಮುಖಂಡರ ದಂಢೆ ವೇದಿಕೆಯಲ್ಲಿ ಆಸೀನರಾಗಿದ್ದರು, ಸರ್ಕಾರಿ ವತಿಯಿಂದ ಹಮ್ಮಿಕೊಂಡ ಧ್ವಜಾರೋಹಣ ಅಥವಾ ಕಾಂಗ್ರೆಸ್ ಪಕ್ಷದ ವತಿಯಿಂದ ಹಮ್ಮಿ ಕೊಂಡ ಧ್ವಜಾರೋಹಣ ಎಂಬುದು ಸಾರ್ವಜ ನಿಕರಿಗೆ ಗೊಂದಲ ಉಂಟಾಗಿದೆ.
ಪ್ರಮುಖವಾಗಿ ಕಾಂಗ್ರೆಸ್ ಮುಖಂಡ ಎ ವಸಂತ ಕುಮಾರ, ಕೆ.ಶಾಂತಪ್ಪ, ಅಮರೇಗೌಡ ಹಂಚಿನಾಳ, ಕೆಇ ಕುಮಾರ, ಶಂಶಾಲಂ, ಆಂಜನೇಯ, ಶಶಿಕಲಾ ಬೀಮರಾಯ, ಶ್ರೀದೇವಿ ನಾಯಕ, ಸೇರಿದಂತೆ 25ಕ್ಕೂ ಅಧಿಕ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಧ್ವಜಾರೋಹಣದ ವೇದಿಕೆಯಲ್ಲಿ ಆಸೀನರಾಗಿ ಶಿಷ್ಟಾಚಾರವನ್ನು ಉಲ್ಲಂಘನೆ ಮಾಡಲಾಗಿದೆ.
ಜಿಲ್ಲಾಡಳಿತ ವತಿಯಿಂದ ಹಮ್ಮಿಕೊಂಡ ಪ್ರತಿಯೊಂದು ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರು ಭಾಗವಹಿಸುತ್ತಿದ್ದು, ಶಿಷ್ಟಾಚಾರ ಉಲ್ಲಂಘನೆ ನಿರಂತರವಾಗುತ್ತಿದೆ, ಹೆಸರಿಗೆ ಮಾತ್ರ ಆಮಂತ್ರಣ ಪತ್ರಿಕೆ ಮಾಡಿದ್ದು, ಯಾರು ಬೇಕಾದರೂ ವೇದಿಕೆ ಕಾರ್ಯಕ್ರಮದಲ್ಲಿ ಆಸೀನರಾಗಬಹುದು ಎಂದು ಸಾರ್ವಜನಿಕ ವಲಯದಲ್ಲಿ ಮಾತು ಕೇಳಿ ಬಂದಿದೆ.