ಬೆಂಗಳೂರು.ರಾಮ ಮಂದಿರಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ’ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ‘ಅಯೋಧ್ಯೆ ರಾಮಮಂದಿರ ವಿಚಾರಕ್ಕೆ ನಮ್ಮ ವಿರೋಧವಿಲ್ಲ. ಮಂದಿರ ನಿರ್ಮಾಣಕ್ಕೆ ನಮ್ಮ ವಿರೋಧವಿಲ್ಲ.
ನಾವು ರಾಮಮಂದಿರದ ಪರವಾಗಿದ್ದೇವೆ. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಪರವಾಗಿ ತಮ್ಮ ಸರ್ಕಾರವಿದ್ದು, ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ. ಉದ್ಘಾಟನೆಗೆ ಆಹ್ವಾನ ಬಂದಿಲ್ಲ: ಸಿದ್ದರಾಮಯ್ಯ ಈ ಮಧ್ಯೆ, ಅಯೋಧ್ಯೆ ರಾಮ ಮಂದಿರ ಉದ್ಘಾಟನೆಗೆ ಆಹ್ವಾನ ಬಂದಿಲ್ಲ, ಆಹ್ವಾನ ಬಂದರೆ ಆಮೇಲೆ ನೋಡೋಣ ಎಂದು ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ರಾಮಮಂದಿರ ಕುರಿತು ಸಹೋದ್ಯೋಗಿಗಳ ಹೇಳಿಕೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮತ ಗಳಿಸಲು ಕೇಂದ್ರದ ಬಿಜೆಪಿ ಸರ್ಕಾರ ರಾಮಮಂದಿರ ಉದ್ಘಾಟನೆಯನ್ನು ಬಳಸಿಕೊಂಡಿದೆ.
ರಾಮ ಮಂದಿರ ಉದ್ಘಾಟನೆ ಒಂದು ಸ್ಟಂಟ್ ಅಷ್ಟೇ ಎಂದು ಸಿದ್ದರಾಮಯ್ಯ ಸಂಪುಟದ ಸಚಿವರೊಬ್ಬರು ಆರೋಪಿಸಿದ ಬೆನ್ನಲ್ಲೇ ಅವರು ರಾಮ ಮಂದಿರದ ಪರ ಹೇಳಿಕೆ ನೀಡಿದ್ದಾರೆ. ರಾಜಕೀಯ ಸ್ಟಂಟ್ ಎಂದಿದ್ದ ಸುಧಾಕರ್ ಇನ್ನು ಪುಲ್ವಾಮಾ ಭಯೋತ್ಪಾದಕ ದಾಳಿ ಸಂದರ್ಭವನ್ನು ನೆನಪಿಸಿಕೊಂಡಿದ್ದ ಕರ್ನಾಟಕ ಸಚಿವ ಸುಧಾಕರ್, ‘ಕಳೆದ ಲೋಕಸಭೆ ಚುನಾವಣೆಯಲ್ಲಿ ಮತ ಗಳಿಸಲು ಬಿಜೆಪಿ ಸರ್ಕಾರ ಪುಲ್ವಾಮಾ ಭಯೋತ್ಪಾದನಾ ದಾಳಿಯನ್ನು ಬಳಸಿಕೊಂಡಿತ್ತು. ಇದೀಗ ಭಗವಾನ್ ರಾಮನ ಮತ್ತು ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಯನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ‘ರಾಮಮಂದಿರ ಉದ್ಘಾಟನೆ ಒಂದು ಸ್ಟಂಟ್ ಆಗಿದ್ದು, ಜನರು ಮೂರ್ಖರಲ್ಲ, ನಮ್ಮನ್ನು ಎರಡು ಬಾರಿ ಮೂರ್ಖರನ್ನಾಗಿ ಮಾಡಲಾಗಿದೆ, ಮೂರನೇ ಬಾರಿಗೆ ನಾವು ಮೋಸ ಹೋಗುವುದಿಲ್ಲ ಎಂಬ ವಿಶ್ವಾಸವಿದೆ.