ಜಾಲಹಳ್ಳಿ: ಕರ್ನಾಟಕ ಎಂದು ನಾಮಕರಣಗೊಂಡು ನ.1ಕ್ಕೆ 50 ವರ್ಷಗಳನ್ನು ಪೂರೈಸಿದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಡೆಯುತ್ತಿರುವ ಕರ್ನಾಟಕ ಸಂಭ್ರಮ-50ರ ಜ್ಯೋತಿ ಯಾತ್ರೆಗೆ ಮಂಗಳವಾರ ಬೆಳಿಗ್ಗೆ ದೇವದುರ್ಗ ತಾಲ್ಲೂಕಿನ ತಿಂಥಣಿ ಬ್ರಿಜ್‌ನಲ್ಲಿ ತಾಲ್ಲೂಕು ಆಡಳಿತದಿಂದ ಅದ್ಧೂರಿ ಸ್ವಾಗತ ಕೋರಲಾಯಿತು.
ನಂತರ ಜಾಲಹಳ್ಳಿ ಪಟ್ಟಣದಲ್ಲಿ ಮಹಿಳೆಯರಿಂದ ಪೂರ್ಣಕುಂಭ, ಕಳಸ, ಹೂಮಾಲೆ ಹಾಕಿ ಪುಷ್ಪಾರ್ಪಣೆ ಮಾಡಲಾಯಿತು. ಕಲಾ ತಂಡಗಳು, ಭಾಜಾ ಭಜಂತ್ರಿ ಸಮೇತ ಮೆರವಣಿಗೆ ಮೂಲಕ ಜೈಕಾರ ಹಾಕುತ್ತ ಪ್ರಮುಖ ರಸ್ತೆಗಳಲ್ಲಿ ರಥಯಾತ್ರೆ ಸಾಗಿತು.
ತಹಶೀಲ್ದಾರ್ ಚನ್ನಮಲ್ಲಪ್ಪ ಗಂಟಿ, ತಾ.ಪಂ ಇಒ ಬಸವರಾಜ, ತಾ.ಪಂ ಸಹಾಯಕ ನಿರ್ದೇಶಕ ಅಣ್ಣರಾವ ನಾಯಕ, ಕಸಾಪ ತಾಲ್ಲೂಕು ಅಧ್ಯಕ್ಷ ಎಚ್. ಸಿವರಾಜ, ಕ್ಷೇತ್ರ ಶಿಕ್ಷಣಾಧಿಕಾರಿ ಸುಖದೇವ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಹಾದೇವನಂದ, ತಾಲ್ಲೂಕು ಅಕ್ಷರ ದಾಸೋಹ ಅಧಿಕಾರಿ ಬದೋಲಿಸಾಬ್, ಪಿಡಿಒ ಬಸವರಾಜ ನಾಯಕ, ಮುಖಂಡರಾದ ಶಂಕರಗೌಡ ಪಾಟೀಲ, ಗ್ರಾ.ಪಂ ಸದಸ್ಯರಾದ ಅಬ್ದುಲ್ ರಹಿಮಾನ ಖುರೇಷಿ, ಬಸವರಾಜ ಗೋಪಾಳಪುರ ಸೇರಿದಂತೆ ಶಾಲಾ, ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕರು, ಕರವೇ ಕಾರ್ಯಯರ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು.