ರಾಯಚೂರು ಜಿಲ್ಲೆಯಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ 7 ಕ್ಷೇತ್ರಗಳ ಪೈಕಿ 4 ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಆಗಿದೆ. ಈಗ ಆ ನಾಲ್ಕು ಜನ ಶಾಸಕರು ಸಹ ನಿಗಮ ಮಂಡಳಿ ಅಧ್ಯಕ್ಷ ಸ್ಥಾ ನಕ್ಕಾಗಿ ಭಾರೀ ಪೈಪೋಟಿ ನಡೆಸಿದ್ದಾರೆ.
ಸಚಿವರು ಆ ನಾಲ್ಕು ಜನ ಶಾಸಕರಿಗೆ ನಿಗಮ ಮಂಡಳಿ ಸ್ಥಾನವೂ ನೀಡದಂತೆ ಹೈಕಮಾಂಡ್ ಮೇಲೆ ಒತ್ತಡ ಹಾಕುತ್ತಿದ್ದಾರೆ ಎಂಬ ಚರ್ಚೆ ಕ್ಷೇತ್ರದಲ್ಲಿ ಶುರುವಾಗಿದೆ. ಎರಡು ಬಾರಿ ಗೆದ್ದವರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಬೇಕೆಂದು ಕಾಂಗ್ರೆಸ್ ಹೈಕಮಾಂಡ್ ತೀರ್ಮಾನ ಮಾಡಿದೆ. ಆದ್ರೆ ಆ ನಿಯಮವು ಬ್ರೇಕ್ ಮಾಡಲು ಕೆಲ ಸಚಿವ ಮಧ್ಯೆ ಮುಸುಕಿನ ಗುದ್ದಾಟ ಶುರುವಾಗಿದ್ದು, ರಾಯಚೂರು ಜಿಲ್ಲೆಯ ನಾಲ್ಕು ಜನ ಶಾಸಕರಲ್ಲಿ ಯಾರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಸಿಗುತ್ತೆ ಎಂಬುವುದೇ ಕುತೂಹಲ ಮೂಡಿಸುತ್ತಿದೆ.
ಇಂತಹ ಕುತೂಹಲ ಇರುವ ವೇಳೆಯಲ್ಲಿ ಮಸ್ಕಿ ಶಾಸಕ ಆರ್. ಬಸನಗೌಡ ತುರ್ವಿಹಾಳ ಮತ್ತು ಲಿಂಗಸೂಗೂರು ಮಾಜಿ ಶಾಸಕ ಡಿ.ಎಸ್. ಹೂಲಗೇರಿ ಬೆಂಗಳೂರಿನ ನಿಲ್ದಾಣದಲ್ಲಿ ಸುರ್ಜೆವಾಲ್ ಅವರನ್ನ ಭೇಟಿ ಮಾಡಿ ನಮಗೆ ಸಚಿವ ಸ್ಥಾನದ ಬೇಡಿಕೆ ಇಟ್ಟಿದ್ದಾರೆ ಎಂಬ ಮಾತುಗಳು ಕಾಂಗ್ರೆಸ್ ವಲಯದಲ್ಲಿ ಚರ್ಚೆ ಆಗುತ್ತಿದೆ. ಆದ್ರೆ ಕಾಂಗ್ರೆಸ್ ನಿಯಮದ ಪ್ರಕಾರ ಯಾವ ಶಾಸಕರು ಎರಡು ಬಾರಿ ಪೂರ್ಣ ಪ್ರಮಾಣದ ಶಾಸಕರಾಗಿ ಆಯ್ಕೆ ಆಗಿದ್ದಾರೋ ಅವರಿಗೆ ನಿಗಮ ಮಂಡಳಿ ಪಟ್ಟ ನೀಡಲು ಚಿಂತನೆ ನಡೆದಿದೆ. ನಿಗಮ ಮಂಡಳಿ ಅಧ್ಯಕ್ಷರ ಪಟ್ಟಿ ಕೂಡ ಸಿದ್ಧವಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.