ರಾಯಚೂರು: ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಪತಿಯಿಂದ ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ.
ತಾಲೂಕಿನ ಇಡಪನೂರು ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಬುಳ್ಳಾಪೂರ ಗ್ರಾಮದಲ್ಲಿ ಘಟನೆ ನಡೆದಿದೆ.
ಪತ್ನಿಯ ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಪತಿ ಕೊಡಲಿಯಿಂದ ಪತ್ನಿಯನ್ನು ಕೊಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ, ಸ್ಥಳಕ್ಕೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಬಿ ನಿಖಿಲ್ ಅವರು ತೆರಳಿ ಪರಿಶೀಲನೆ ನಡೆಸಿದ್ದಾರೆ.
ಕೊಲೆ ಮಾಡಿರುವ ಬಗ್ಗೆ ಮಾಹಿತಿ ಕಲೆ ಹಾಕುತಿದ್ದು ಕೊಲೆ ಕುರಿತು ನಿಖರ ಮಾಹಿತಿ ತಿಳಿದು ಬಂದಿಲ್ಲ, ಈ ಕುರಿತು ಇಡಪನೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.