Live Stream

May 2025
S M T W T F S
 123
45678910
11121314151617
18192021222324
25262728293031

| Latest Version 9.4.1 |

State News

HSRP ನಂಬರ್ ಪ್ಲೇಟ್ ಇಲ್ಲದಿದ್ದರೆ ಫೆ.17 ರಿಂದ ದಂಡ ಗ್ಯಾರಂಟಿ

HSRP ನಂಬರ್ ಪ್ಲೇಟ್ ಇಲ್ಲದಿದ್ದರೆ ಫೆ.17 ರಿಂದ ದಂಡ ಗ್ಯಾರಂಟಿ

ಬೆಂಗಳೂರು: ಈಗಾಗಲೇ ರಾಜ್ಯ ಸಾರಿಗೆ ಇಲಾಖೆ ಹೆಚ್‌ಎಸ್‌ಆರ್​ಪಿ ನೇಮ್ ಬೋರ್ಡ್ ಹಾಕಿಸಿಕೊಳ್ಳಲು ವಾಹನ ಸವಾರರಿಗೆ ಡೆಡ್ಲೈನ್ ನೀಡಿದೆ. ಅದರೆ ಜನರು ಯಾರು ಕೂಡ ಹೊಸ ನಂಬರ್ ಪ್ಲೇಟ್ ಗಳನ್ನು ಹಾಕಿಸಿಕೊಳ್ಳಲು ಮುಂದಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ದಂಡ ಪ್ರಯೋಗಕ್ಕೆ ಮುಂದಾಗಿದೆ. ಫೆ.17 ರಿಂದ ಹೆಚ್‌ಎಸ್‌ಆರ್​ಪಿ ನಂಬರ್ ಪ್ಲೇಟ್ ಇಲ್ಲ ಅಂದರೆ ದಂಡ ಫಿಕ್ಸ್. ಮೊದಲನೆ ಬಾರಿ ಸಿಕ್ಕಿಬಿದ್ದರೆ ಸಾವಿರ, 2ನೇ ಬಾರಿ ಸಿಕ್ಕಿಬಿದ್ದರೆ 2 ಸಾವಿರ ದಂಡ ಹಾಕಲಾಗುತ್ತೆ.

2019 ಏ.1ಕ್ಕಿಂತ ಮುಂಚೆ ನೋಂದಣಿಯಾ ಗಿರುವ ಎಲ್ಲಾ ಮಾದರಿಯ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟೇಷನ್ ಪ್ಲೇಟ್‌ಗಳನ್ನು (ಹೆಚ್‌ಎಸ್‌ಆರ್‌ಪಿ) ಹಾಕಿಸಿಕೊಳ್ಳುವಂತೆ ನೀಡಲಾಗಿದ್ದ ಗಡುವು ಸಮೀಪಿಸುತ್ತಿದ್ದರೂ ನಂಬರ್ ಪ್ಲೇಟ್ ಬದಲಾವಣೆಗೆ ವಾಹನ ಮಾಲೀಕರು ಆಸಕ್ತಿ ತೋರಿಲ್ಲ. ಹೀಗಾಗಿ ವಾಹನ ಮಾಲೀಕರಿಗೆ ಬಿಸಿ ಮುಟ್ಟಿಸಲು ನಿರ್ಧರಿಸಿರುವ ಸಾರಿಗೆ ಇಲಾಖೆ ಫೆ.17ರ ನಂತರ ದಂಡಾಸ್ತ್ರ ಪ್ರಯೋಗಿಸಲು ಮುಂದಾಗಿದೆ. ಹೆಚ್‌ಎಸ್‌ಆರ್‌ಪಿ ಹಾಕಿಸಲು ಸಾರಿಗೆ ಇಲಾಖೆ 2023ರ ನ.17ರ ಗಡುವು ವಿಧಿಸಿತ್ತು. ಆದರೆ, ವಾಹನ ಮಾಲೀಕರು ನಿರಾಸಕ್ತಿ ತೋರಿದ ಹಿನ್ನೆಲೆಯಲ್ಲಿ 2024ರ ಫೆ.17ರವರೆಗೆ ವಿಸ್ತರಣೆ ಮಾಡಲಾಗಿತ್ತು. ನಿಗದಿಪಡಿಸಿರುವ ಗಡುವು ಅಂತ್ಯವಾಗಲು ಇನ್ನು 16 ದಿನಗಳಷ್ಟೇ ಬಾಕಿ ಉಳಿದಿವೆ. ಆದರೆ, ಈವರೆಗೆ ಬರೀ 10 ಲಕ್ಷ ವಾಹನಗಳಿಗಷ್ಟೇ ಹೆಚ್‌ಎಸ್‌ಆರ್‌ಪಿ ಹಾಕಿಸಿಕೊಳ್ಳಲಾಗಿದೆ ಎಂದು ಸಾರಿಗೆ ಇಲಾಖೆಯ ಅಡಿಷನಲ್ ಕಮೀಷನರ್ ಮಲ್ಲಿಕಾರ್ಜುನ ಅವರು ತಿಳಿಸಿದ್ದಾರೆ.

Megha News