ರಾಯಚೂರು ,ಮೇ.೧೩-
ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ (ನರೇಗಾ) ಯಲ್ಲಿ ಕೆಲಸ ಮಾಡುತ್ತಿದ್ದಾಗಲೇ ಕಾರ್ಮಿಕ ಮಹಿಳೆ ಸಾವನ್ನಪ್ಪಿದ ಘಟನೆ ಲಿಂಗಸುಗೂರು ತಾಲ್ಲೂಕಿನ ಚಿಕ್ಕ ನಗನೂರು ಗ್ರಾಮದಲ್ಲಿ ವರದಿಯಾಗಿದೆ
ಮೃತಪಟ್ಟ ಮಹಿಳೆಯನ್ನು ಮಹಾವೀರ ಸಿಂಗ್ (50) ಗುರುತಿಸಲಾಗಿದೆ.ಗೆಜ್ಜಲಗಟ್ಟಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕ ನಗನೂರು ಗ್ರಾಮದಲ್ಲಿ ನಾಲಾ ಹೂಳೆತ್ತುವ ಕಾಮಗಾರಿ ಮಾಡುತ್ತಿದ್ದ ವೇಳೆ ಮಹಿಳೆಗೆ ತೀವ್ರ ಬಿಸಿಲಿಗೆ ತಲೆ ಸುತ್ತು ಬಂದು ಕುಸಿದು ಬಿದ್ದು ಸಾವನ್ನಪ್ಪಿದ್ದಾಳೆ.
ಮೃತ ಮಹಿಳೆಯ ಮನೆಗೆ ಗ್ರಾಮ ಪಂಚಾಯಿತಿ ಸಿಬ್ಬಂದಿಗಳಾದ ಜೆಇ ರಾಘವೇಂದ್ರ ಹಾಗೂ ಬಿಲ್ ಕಲೆಕ್ಟರ್ ವೆಂಕಪ್ಪ ಚಿಕ್ಕ ನಗನೂರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತಳ ಕುಟುಂಬಕ್ಜೆ ಪರಿಹಾರ ನೀಡುವಂತೆ ಕಾರ್ಮಿಕರು ಆಗ್ರಹಿಸಿದ್ದಾರೆ.