ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಮಹಿಳಾ ಮತದಾರರ ನೋಂದಣಿ, ಪರಿಷ್ಕರಣೆ ಅಭಿಯಾನವು ಡಿಸೆಂಬರ್ 2,3 ರಂದು ನಡೆಯಲಿದ್ದು, ಅಭಿಯಾನದಲ್ಲಿ ಮಹಿಳಾ ಮತದಾರರು ಕಡ್ಡಾಯವಾಗಿ ಹೆಸರು ನೋಂದಾಯಿಸಿಕೊಳ್ಳುವಂತೆ ಮಾಡಲು ತಾಲೂಕ ನೋಡಲ್ ಅಧಿಕಾರಿಯನ್ನು ನೇಮಿಸಲಾಗಿದೆ.
ಸಿರವಾರ ತಾಲೂಕಿಗೆ ನೋಡಲ್ ಅಧಿಕಾರಿಯಾಗಿ ಶಿಶು ಅಭಿವೃದ್ಧಿ ಯೋಜನೆ ಅಧಿಕಾರಿಗಳನ್ನು ನೇಮಕ ಮಾಡಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಮಹಿಳಾ ಮತದಾರರನ್ನು ನೋಂದಣಿ ಮಾಡಿಸಬೇಕು ಮತ್ತು ಪರಿಷ್ಕರಣೆ ಅಭಿಯಾನವನ್ನು ಯಶಸ್ವಿಯಾಗಿ ನಿರ್ವಹಿಸಬೇಕು. ಈ ಅಭಿಯಾನವು ಡಿಸೆಂಬರ್2,3 ರಂದು ಎರಡು ದಿನಗಳ ಕಾಲ ನಡೆಯಲಿದೆ. ಪ್ರತಿ ದಿನ ಬೆಳಿಗ್ಗೆ 9ರಿಂದ ಸಂಜೆ 5.30ರ ವರೆಗೂ ನಡೆಯಲಿರುವುದರಿಂದ ಮತದಾರರ ಪಟ್ಟಿಯಲ್ಲಿ ಮಹಿಳೆಯರನ್ನು ಹೆಚ್ಚಿನ ಸಂಖ್ಯೆಯ ನೋಂದಾಯಿಸಿಕೊಳ್ಳುವಂತೆ ಮಾಡಲು ಶಿಶು ಅಭಿವೃದ್ಧಿ ಯೋಜನೆ ಅಧಿಕಾರಿಗಳು ತಾಲೂಕ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಅಂಗನವಾಡಿ ಕೇಂದ್ರಗಳ ಕಾರ್ಯಕರ್ತರ ಮೂಲಕ ಆಯಾ ಗ್ರಾಮ ಪಂಚಾಯತಿಗಳಲ್ಲಿ ಮಹಿಳೆಯರನ್ನು ನೋಂದಣಿ ಮಾಡಿಸುವ ಕಾರ್ಯ ಮಾಡಬೇಕಾಗಿದೆ.
ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿಗಳನ್ನು ಹಾಗೂ ಹತ್ತಿರದ ಅಂಗನವಾಡಿ ಕಾರ್ಯಕರ್ತರನ್ನು ಸಂಪರ್ಕಿಸಬೇಕು.
ದ್ವಿತೀಯ ಪಿಯುಸಿ ಓದುತ್ತಿರುವ ಮಹಿಳಾ ವಿದ್ಯಾರ್ಥಿಗಳು ಹಾಗು ಇದುವರೆಗೂ ಮತದಾರ ಪಟ್ಟಿಯಲ್ಲಿ ಹೆಸರು ನೋಂದಾಯಿಸದೆ ಇರುವ ಮಹಿಳೆಯರು ಕಡ್ಡಾಯವಾಗಿ ದಿನಾಂಕ 2-12-23 ಮತ್ತು 3-12-23 ರಂದು ಮಹಿಳಾ ವಿಶೇಷ ನೋಂದಣಿ ಅಭಿಯಾನದಂದು ನೋಂದಣಿ ಮಾಡಿಕೊಳ್ಳುವಂತೆ ಸಿರವಾರ ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಸಹಾಯಕ ಚುನಾವಣಾ ನೋಂದಣೆ ಅಧಿಕಾರಿಗಳು ಪತ್ರಿಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.